ವಿರಾಟ್ ಕೊಹ್ಲಿ ಮಾಡಿದ್ದನ್ನು ಸ್ವತಃ ಸಚಿನ್ ತೆಂಡೂಲ್ಕರ್ ಕೈಯಲ್ಲೂ ಮಾಡಲು ಆಗಲಿಲ್ಲ!

Published On :
ನವದೆಹಲಿ: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮಾಡಿದ್ದನ್ನು ಸ್ವತಃ ಟೀಂ ಇಂಡಿಯಾದ ಮಾಜಿ ಆಟಗಾರ, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಕೈಯಲ್ಲು ಮಾಡಲು ಸಾಧ್ಯವಾಗಲಿಲ್ಲ ಎಂದು ಆಸ್ಟ್ರೇಲಿಯಾದ ಖ್ಯಾತ ಕ್ರಿಕೆಟಿಗ ಶೇನ್ ವಾರ್ನ್ ಹೇಳಿದ್ದಾರೆ.
ವಿರಾಟ್ ಕೊಹ್ಲಿ ಮತ್ತು ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ ಕ್ರಿಕೆಟ್ ನ ಮೂರು ಮಾದರಿಗಳಲ್ಲೂ ಅತ್ಯುತ್ತಮ ಸಾಧನೆಗಳನ್ನು ಮಾಡಿದ್ದಾರೆ ಎಂದು ಇಬ್ಬರು ಆಟಗಾರರನ್ನು ಶೇನ್ ವಾರ್ನ್ ಪ್ರಶಂಸಿಸಿದ್ದಾರೆ.
ಏಕದಿನ ಕ್ರಿಕೆಟ್ ನಲ್ಲಿ ಚೇಸಿಂಗ್ ನಲ್ಲಿ ವಿರಾಟ್ ಕೊಹ್ಲಿ ಅತೀ ಹೆಚ್ಚು ಶತಕ(19) ಅಂದರೆ ಸಚಿನ್ ಗಿಂತ ಎರಡು ಶತಕ ಹೆಚ್ಚು ಸಿಡಿಸಿದ್ದಾರೆ. ಅಲ್ಲದೆ ಅತೀ ಹೆಚ್ಚು ಶತಕ ಸಿಡಿಸಿದ ಆಟಗಾರ ಪೈಕಿ ವಿರಾಟ್ ಕೊಹ್ಲಿ(35) ಶತಕ ಸಿಡಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಸಚಿನ್ 51 ಶತಕ ಸಿಡಿಸಿ ಅಗ್ರಸ್ಥಾನದಲ್ಲಿದ್ದಾರೆ ಎಂದರು.
ಏಕದಿನ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಆಟದ ವೈಖರಿಯನ್ನು ನಾನು ನೋಡಿದ್ದೇನೆ. ಚೇಸಿಂಗ್ ವೇಳೆ ಅವರ ಶತಕಗಳು ನನ್ನಲ್ಲಿ ಅಚ್ಚರಿ ಮೂಡಿಸಿವೆ. ಇನ್ನು ಶತಕ ಗಳಿಕೆಯಲ್ಲಿ ಸಚಿನ್ ಗಿಂತ ಕೊಹ್ಲಿ ಸಾಧನೆ ಅಪಾರ ಎಂದು ಶೇನ್ ವಾರ್ನ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್Sachin Tendulkarಸಚಿನ್ ತೆಂಡೂಲ್ಕರ್ಟೀಂ ಇಂಡಿಯಾTeam IndiaVirat Kohliವಿರಾಟ್ ಕೊಹ್ಲಿShane Warneಶೇನ್ ವಾರ್ನ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


