ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಎಬಿಡಿ ವಿಲಿಯರ್ಸ್ ವಿದಾಯ

ದಕ್ಷಿಣ ಆಫ್ರಿಕಾದ ಮಾಜಿ ನಾಯಕ, ಸ್ಫೋಟಕ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ದಿಢೀರ್ ಅಂತಾ ವಿದಾಯ ಘೋಷಿಸಿದ್ದಾರೆ...
ಎಬಿಡಿ ವಿಲಿಯರ್ಸ್
ಎಬಿಡಿ ವಿಲಿಯರ್ಸ್
Updated on
ದಕ್ಷಿಣ ಆಫ್ರಿಕಾದ ಮಾಜಿ ನಾಯಕ, ಸ್ಫೋಟಕ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ದಿಢೀರ್ ಅಂತಾ ವಿದಾಯ ಘೋಷಿಸಿದ್ದಾರೆ.
34 ವರ್ಷದ ಎಬಿಡಿ ವಿಲಿಯರ್ಸ್ 14 ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್ ಮೂರು ಮಾದರಿಯಲ್ಲೂ ಆಡಿದ್ದರು. ದಕ್ಷಿಣ ಆಫ್ರಿಕಾ ಪರ 114 ಟೆಸ್ಟ್, 228 ಏಕದಿನ ಮತ್ತು 78 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿದ್ದಾರೆ. 
ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಲು ಇದು ಸರಿಯಾದ ಸಮಯ. ನಾನು ಸಾಕಷ್ಟು ಬಳಲಿದ್ದೇನೆ ಹೀಗಾಗಿ 14 ವರ್ಷಗಳ ಸುದೀರ್ಘ ಆಟಕ್ಕೆ ವಿದಾಯ ಹೇಳಿರುವುದಾಗಿ ಎಬಿಡಿ ವಿಲಿಯರ್ಸ್ ಹೇಳಿದ್ದಾರೆ.
2005ರ ಏಕದಿನ ಪಂದ್ಯಕ್ಕೆ ಪಾದಾರ್ಪಣೆ ಮಾಡಿದ್ದ ಡಿವಿಲಿಯರ್ಸ್ 228 ಪಂದ್ಯಗಳನ್ನು ಆಡಿದ್ದು 218 ಇನ್ನಿಂಗ್ಸ್ ನಿಂದ ಒಟ್ಟು 9577 ರನ್ ಸಿಡಿಸಿದ್ದಾರೆ. ಇನ್ನು 78 ಟಿ20 ಪಂದ್ಯವಾಡಿರುವ ಎಬಿಡಿ 75 ಇನ್ನಿಂಗ್ಸ್ ಗಳಿಂದ 1672 ರನ್ ಗಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com