2008ರಲ್ಲಿ ಆರಂಭಗೊಂಡ ಐಪಿಎಲ್ ಟೂರ್ನಿ ಒಟ್ಟು 11 ಸೀಸನ್ ಗಳನ್ನು ಪೂರ್ಣಗೊಳಿಸಿದ್ದು, 11 ವರ್ಷಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಒಟ್ಟು 7 ಬಾರಿ ಫೈನಲ್ ಪ್ರವೇಶ ಮಾಡಿದ್ದು, ಈ ಪೈಕಿ 3 ಬಾರಿ ಪ್ರಶಸ್ತಿಗೆ ಮುತ್ತಿಟ್ಟಿದೆ. ಅಂತೆಯೇ 4 ಬಾರಿ ರನ್ನರ್ ಅಪ್ ಆಗಿದೆ. ಇನ್ನು ಅತೀ ಹೆಚ್ಚು ಬಾರಿ ಐಪಿಎಲ್ ಟೂರ್ನಿಯಲ್ಲಿ ಫೈನಲ್ ಪ್ರವೇಶ ಮಾಡಿದ ತಂಡಗಳ ಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಎರಡನೇ ಸ್ಥಾನದಲ್ಲಿದೆ. ಮುಂಬೈ ತಂಡ ಒಟ್ಟು 4 ಬಾರಿ ಫೈನಲ್ ಪ್ರವೇಶ ಮಾಡಿದ್ದು, ಈ ಪೈಕಿ 3 ಬಾರಿ ಪ್ರಶಸ್ತಿಗೆ ಮುತ್ತಿಟ್ಟಿದೆ. ಒಮ್ಮೆ ಮಾತ್ರ ರನ್ನರ್ ಅಪ್ ಆಗಿದೆ.