ಟೀಂ ಇಂಡಿಯಾ ವಿಂಡೀಸ್ ವಿರುದ್ಧ 8ನೇ ದ್ವಿಪಕ್ಷೀಯ ಸರಣಿ ಗೆದ್ದ ಸಾಧನೆ

ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಐದನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 9 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿದ್ದು ಏಕದಿನ ಸರಣಿ ಕೈವಶ ಮಾಡಿಕೊಂಡಿದೆ.
ಟೀಂ ಇಂಡಿಯಾ
ಟೀಂ ಇಂಡಿಯಾ
ತಿರುವನಂತಪುರಂ: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಐದನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 9 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿದ್ದು ಏಕದಿನ ಸರಣಿ ಕೈವಶ ಮಾಡಿಕೊಂಡಿದೆ. 
ಗ್ರೀನ್ ಫೀಲ್ಡ್ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ಆಟಗಾರರು ಟೀಂ ಇಂಡಿಯಾ ಬೌಲಿಂಗ್ ದಾಳಿಗೆ ಬೆದರಿ ಪೆವಿಲಿಯನ್ ಪರೇಡ್ ನಡೆಸಿದರು. ಅಂತಿಮವಾಗಿ 31.5 ಓವರ್ ಮುಕ್ತಾಯಕ್ಕೆ 104 ರನ್ ಗಳಿಗೆ ಆಲೌಟ್ ಆಗಿದ್ದು ಭಾರತಕ್ಕೆ ಗೆಲ್ಲಲು 105 ರನ್ ಗಳ ಗುರಿ ನೀಡಿತ್ತು.
ವಿಂಡೀಸ್ ನೀಡಿದ 105 ರನ್ ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ರೋಹಿತ್ ಶರ್ಮಾ ಅಜೇಯ 63 ಹಾಗೂ ವಿರಾಟ್ ಕೊಹ್ಲಿ ಅಜೇಯ 33 ರನ್ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿದರು.
ವೆಸ್ಟ್ ಇಂಡೀಸ್ ಪರ ಪೊವೆಲ್ 16, ಸ್ಯಾಮೂಯೆಲ್ಸ್ 24, ಹೊಲ್ಡೆರ್ 25 ರನ್ ಗಳಿಸಿದ್ದಾರೆ.
ಭಾರತ ಪರ ಬೌಲಿಂಗ್ ನಲ್ಲಿ ರವೀಂದ್ರ ಜಡೇಜಾ 4, ಬುಮ್ರಾ ಹಾಗೂ ಅಹ್ಮದ್ ತಲಾ 2, ಕುಲದೀಪ್ ಮತ್ತು ಭುವನೇಶ್ವರ್ ಕುಮಾರ್ ತಲಾ 1 ವಿಕೆಟ್ ಪಡೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com