ಮೊದಲ ಟಿ20 ಪಂದ್ಯ: ವೆಸ್ಟ್ ಇಂಡೀಸ್ ವಿರುದ್ಧ ಟೀಂ ಇಂಡಿಯಾಗೆ ರೋಚಕ ಜಯ

ವೆಸ್ಟ್ ಇಂಡೀಸ್ ಹಾಗೂ ಟೀಂ ಇಂಡಿಯಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ 5 ವಿಕೆಟ್ ಗಳಿಂದ ರೋಚಕ ಜಯ ಗಳಿಸಿದೆ...
ಟೀಂ ಇಂಡಿಯಾ
ಟೀಂ ಇಂಡಿಯಾ
Updated on
ಕೋಲ್ಕತ್ತಾ: ವೆಸ್ಟ್ ಇಂಡೀಸ್ ಹಾಗೂ ಟೀಂ ಇಂಡಿಯಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ 5 ವಿಕೆಟ್ ಗಳಿಂದ ರೋಚಕ ಜಯ ಗಳಿಸಿದೆ.
ಕೋಲ್ಕತ್ತಾದ ಈಡೆನ್ ಗಾರ್ಡನ್ ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ಟೀಂ ಇಂಡಿಯಾ ಬೌಲರ್ ಗಳ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದರು. ವಿಂಡೀಸ್ ನಿಗದಿತ ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 109 ರನ್ ಪೇರಿಸಿತ್ತು. 
ಟೀಂ ಇಂಡಿಯಾ ನೀಡಿದ 110 ರನ್ ಗುರಿ ಬೆನ್ನಟ್ಟಿದ ಟೀಂ ಇಂಡಿಯಾಗೆ ಆರಂಭಿಕ ಆಘಾತ ಎದುರಾಯಿತು. 47 ರನ್ ಗಳಿಗೆ ಪ್ರಮುಖ ನಾಲ್ಕು ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ತಂಡಕ್ಕೆ ಆಸರೆಯಾಗಿದ್ದು ದಿನೇಶ್ ಕಾರ್ತಿಕ್ ಹಾಗೂ ಕೃನಾಲ್ ಪಾಂಡ್ಯ ಸಂಯಮದ ಬ್ಯಾಟಿಂಗ್ ಮಾಡಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಟೀಂ ಇಂಡಿಯಾ 17.5 ಓವರ್ ಮುಕ್ತಾಯಕ್ಕೆ 110 ರನ್ ಪೇರಿಸಿದೆ.
ಟೀಂ ಇಂಡಿಯಾ ಪರ ರೋಹಿತ್ ಶರ್ಮಾ 6, ಶಿಖರ್ ಧವನ್ 3, ಕೆಎಲ್ ರಾಹುಲ್ 16, ಮನೀಷ್ ಪಾಂಡ್ಯ 19, ದಿನೇಶ್ ಕಾರ್ತಿಕ್ ಅಜೇಯ 31 ಹಾಗೂ ಕೃನಾಲ್ ಪಾಂಡ್ಯ ಅಜೇಯ 21 ರನ್ ಬಾರಿಸಿದ್ದಾರೆ. 
ವಿಂಡೀಸ್ ಪರ ಬೌಲಿಂಗ್ ನಲ್ಲಿ ಥಾಮಸ್ ಮತ್ತು ಬ್ರಾಥೈಟ್ ತಲಾ 2 ವಿಕೆಟ್ ಪಡೆದಿದ್ದಾರೆ. 
ವೆಸ್ಟ್ ಇಂಡೀಸ್ ಪರ ಆರಂಭಿಕರಾಗಿ ಕಣಕ್ಕಿಳಿದ ಹೋಪ್ 14, ರಮ್ದಿನ್ 2,  ಹೆಟ್ಮರ್ 10, ಕೀರನ್ ಪೊಲಾರ್ಡ್ 14, ಅಲೇನ್ 24 ರನ್ ಗಳಿಸಿದ್ದಾರೆ. 
ಭಾರತ ಪರ ಕುಲದೀಪ್ ಯಾದವ್ 3, ಉಮೇಶ್ ಯಾದವ್, ಬುಮ್ರಾ, ಖಲೀಲ್ ಹಾಗೂ ಹಾರ್ದಿಕ್ ಪಾಂಡ್ಯ ಒಂದು ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com