2ನೇ ಟಿ20: ವಿಂಡೀಸ್ ವಿರುದ್ಧ ಭಾರತಕ್ಕೆ 71 ರನ್ ಗಳ ಭರ್ಜರಿ ಜಯ, 2-0ರಲ್ಲಿ ಸರಣಿ ಮುನ್ನಡೆ

ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದಲ್ಲೂ ಟೀಂ ಇಂಡಿಯಾ ಗೆಲುವಿನ ನಾಗಾಲೋಟ ಮುಂದುವರೆದಿದ್ದು, ಎರಡನೇ ಪಂದ್ಯದಲ್ಲಿ 71 ರನ್ ಗಳ ಭರ್ಜರಿ ಜಯ ಸಾಧಿಸಿದೆ.
ವಿಕೆಟ್ ಪಡೆದ ಸಂಭ್ರಮದಲ್ಲಿ ಭಾರತ ತಂಡ
ವಿಕೆಟ್ ಪಡೆದ ಸಂಭ್ರಮದಲ್ಲಿ ಭಾರತ ತಂಡ
ಲಖನೌ: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದಲ್ಲೂ ಟೀಂ ಇಂಡಿಯಾ ಗೆಲುವಿನ ನಾಗಾಲೋಟ ಮುಂದುವರೆದಿದ್ದು, ಎರಡನೇ ಪಂದ್ಯದಲ್ಲಿ 71 ರನ್ ಗಳ ಭರ್ಜರಿ ಜಯ ಸಾಧಿಸಿದೆ.
ಭಾರತ ತಂಡ ನೀಡಿದ್ದ 196 ರನ್ ಗಳ ಬೃಹತ್ ಗುರಿ ಬೆನ್ನು ಹತ್ತಿದ ವಿಂಡೀಸ್ ತಂಡ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 124 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಆ ಮೂಲಕ ಭಾರತದ ಎದುರು 71 ರನ್ ಗಳ ಅಂತರದ ಹೀನಾಯ ಸೋಲು ಅನುಭವಿಸಿತು. ವಿಂಡೀಸ್ ಪರ ಡರ್ರೇನ್ ಬ್ರಾವೋ ಗಳಿಸಿದ 23 ರನ್ ಗಳ ವೈಯುಕ್ತಿಕ ಗರಿಷ್ಟ ರನ್ ಗಳಿಕೆಯಾಗಿತ್ತು. ಇದು ಭಾರತೀಯ ಬೌಲರ್ ಗಳ ಎದುರು ವಿಂಡೀಸ್ ತಂಡದ ಬ್ಯಾಟಿಂಗ್ ವೈಫಲ್ಯವನ್ನು ಎತ್ತಿ ತೋರಿಸುತ್ತದೆ.
ಭಾರತದ ಪರ ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್, ಜಸ್ ಪ್ರೀತ್ ಬುಮ್ರಾ ಮತ್ತು ಕುಲದೀಪ್ ಯಾದವ್ ತಲಾ 2 ವಿಕೆಟ್ ಗಳಿಸಿದರು.
ಇನ್ನು ಭಾರತದ ಪರ ಭರ್ಜರಿ ಬ್ಯಾಟಿಂಗ್ ಮೂಲಕ ಶತಕ ಸಿಡಿಸಿದ ರೋಹಿತ್ ಶರ್ಮಾ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com