ಧವನ್ ಭರ್ಜರಿ ಬ್ಯಾಟಿಂಗ್, ಟಿ-20 ಸರಣಿ ಕ್ಲೀನ್ ಸ್ವೀಪ್​ ಮಾಡಿದ ಭಾರತ

ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಭಾರತ ಆರು ವಿಕೆಟ್​ಗಳ ಭರ್ಜರಿ ಜಯ...
ಟ್ರೋಫಿಯೊಂದಿಗೆ ಟೀಂ ಇಂಡಿಯಾ
ಟ್ರೋಫಿಯೊಂದಿಗೆ ಟೀಂ ಇಂಡಿಯಾ
Updated on: 
ಚೆನ್ನೈ: ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಭಾರತ ಆರು ವಿಕೆಟ್​ಗಳ ಭರ್ಜರಿ ಜಯ ಗಳಿಸುವ ಮೂಲಕ ಸರಣಿಯನ್ನು ಕ್ಲೀನ್​ ಸ್ವೀಪ್​ ಮಾಡಿದೆ.
ಇಂದು ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವಿಂಡೀಸ್, 20 ಓವರುಗಳಲ್ಲಿ ಮೂರು ವಿಕೆಟ್‌ ನಷ್ಟಕ್ಕೆ 181 ರನ್‌ ಗಳಿಸಿತು.
ವೆಸ್ಟ್​ ಇಂಡೀಸ್​ ನೀಡಿದ್ದ 182 ರನ್ ಗಳ​ ಗುರಿ ಬೆನ್ನತ್ತಿದ ಟೀಂ ಇಂಡಿಯಾ, ಶಿಖರ್​ ಧವನ್​ (92) ಮತ್ತು ರಿಷಭ್​ ಪಂತ್​ (58) ಅವರ ಭರ್ಜರಿ ಅರ್ಧಶತಕಗಳ ನೆರವಿನಿಂದ 20 ಓವರ್​ಗಳಲ್ಲಿ ಕೇವಲ 4 ವಿಕೆಟ್​ ಕಳೆದುಕೊಂಡು 182 ರನ್​ ಗಳಿಸಿ ಗೆಲುವಿನ ದಡ ಸೇರಿತು. ಈ ಮೂಲಕ ವೆಸ್ಟ್​ ಇಂಡೀಸ್​ ವಿರುದ್ಧದ ಟಿ20 ಸರಣಿಯಲ್ಲಿ 3-0 ಅಂತರದಿಂದ ಗೆಲುವು ಸಾಧಿಸಿತು.
ಆರಂಭಿಕ ಆಟಗಾರ ರೋಹಿತ್​ ಶರ್ಮಾ ಕೇವಲ 4 ರನ್​ ಗಳಿಸಿ ಔಟಾದರು. ಕೆ.ಎಲ್​. ರಾಹುಲ್​ (17) ರನ್​ ಗಳಿಸಿದರು. ನಂತರ ಜತೆಯಾದ ಧವನ್​ ಮತ್ತು ಪಂತ್​ ಜೋಡಿ ಮೂರನೇ ವಿಕೆಟ್​ಗೆ 130 ರನ್​ ಕಲೆ ಹಾಕಿ ತಂಡವನ್ನು ಗೆಲುವಿನ ಸನಿಹಕ್ಕೆ ಕೊಂಡೊಯ್ದಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com