ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆಲುವು ಸಾಧಿಸಿದೆ. ಇನ್ನು ನಿನ್ನೆ ನಡೆದ ಎರಡನೇ ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿದ್ದು ಒಟ್ಟಾರೆ ನಾಳೆ ನಡೆಯಲಿರುವ ಮೂರನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆದ್ದರೆ ಸರಣಿ ಗೆಲ್ಲಲಿದೆ. ಇನ್ನು ಭಾರತ ಗೆದ್ದರೆ ಸರಣಿಯಲ್ಲಿ ಸಮಬಲ ಸಾಧಿಸಿದಂತಾಗುತ್ತದೆ. ಈ ಹಿನ್ನೆಲೆಯಲ್ಲಿ ಸರಣಿ ಸೋಲು ತಪ್ಪಿಸಿಕೊಳ್ಳಲು ಭಾರತ ನಾಳಿನ ಪಂದ್ಯದಲ್ಲಿ ಗೆಲುವು ಸಾಧಿಸುವುದು ಅನಿರ್ವಾಯವಾಗಿದೆ.