ಆಸ್ಟ್ರೇಲಿಯಾ ವಿರುದ್ಧ 3 ನೇ ಟಿ20 ಪಂದ್ಯದಲ್ಲಿ ಗೆದ್ದ ಭಾರತ: ಸರಣಿ ಸಮಬಲ

ಸಿಡ್ನಿಯಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ನಡುವಿನ 3 ನೇ ಹಾಗು ಅಂತಿಮ T20 ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್ ಗಳ ಗೆಲುವು ಸಾಧಿಸಿದೆ.
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
ಸಿಡ್ನಿ: ಸಿಡ್ನಿಯಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ನಡುವಿನ 3 ನೇ ಹಾಗು ಅಂತಿಮ T20 ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್ ಗಳ ಗೆಲುವು ಸಾಧಿಸಿದೆ. 
ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಗಳ ನಷ್ಟಕ್ಕೆ 164 ರನ್ ಗಳಿಸಿ ಭಾರತಕ್ಕೆ 165 ರನ್ ಗಳ ಗುರಿ ನೀಡಿತ್ತು. ಆಸ್ಟ್ರೇಲಿಯಾ ನೀಡಿದ ಮೊತ್ತವನ್ನು ಬೆನ್ನಟ್ಟಿದ ಭಾರತ ತಂಡ ಆರಂಭದಿಂದಲೂ ಆಸ್ಟ್ರೇಲಿಯಾ ಬೌಲರ್ ಗಳನ್ನು ಸಮರ್ಥವಾಗಿ ಎದುರಿಸಿ  19.4 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 168 ರನ್ ದಾಖಲಿಸಿತು. 
ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ದಿನೇಶ್ ಕಾರ್ತಿಕ್ ಕ್ರೀಸ್ ನಲ್ಲಿದ್ದು ಭಾರತ ತಂಡದ ಗೆಲುವಿನ ಹಂತದಲ್ಲಿ ಉತ್ತಮ ಪ್ರದರ್ಶನ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com