ಕೊಲಂಬೊ: ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಉಭಯ ತಂಡದ ಸ್ಪಿನ್ನ ಬೌಲರ್ ಗಳು ವಿಶಿಷ್ಠ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.
ಉಭಯ ತಂಡದ ಸ್ಪಿನ್ನರ್ ಗಳು ಒಟ್ಟು 82 ವಿಕೆಟ್ ಗಳನ್ನು ಪಡೆಯುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ. ಈ ಹಿಂದೆ 1998ರಲ್ಲಿ ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ನಡುವಿನ ಟೆಸ್ಟ್ ಪಂದ್ಯದಲ್ಲಿ ಸ್ಪಿನ್ನರ್ ಗಳು 79 ವಿಕೆಟ್ ಗಳನ್ನು ಪಡೆದಿದ್ದರು.
ಸದ್ಯದ ಸರಣಿಯಲ್ಲಿ ಇಂಗ್ಲೆಂಡ್ 2-0 ಅಂತರದಿಂದ ಗೆದ್ದುಕೊಂಡಿದೆ. ಮೊದಲ ಟೆಸ್ಟ್ ಪಂದ್ಯವನ್ನು 211 ರನ್ ಹಾಗೂ ಎರಡನೇ ಪಂದ್ಯವನ್ನು 57 ರನ್ ಗಳಿಂದ ಗೆದ್ದುಕೊಂಡಿದೆ.