ವಿರಾಟ್ ಕೊಹ್ಲಿ ಸಿಡಿಸಿದ ಸಿಕ್ಸರ್ ಕ್ಯಾಚ್ ಹಿಡಿದು ಸಂಭ್ರಮಿಸಿದ ಭದ್ರತಾ ಸಿಬ್ಬಂದಿ, ವಿಡಿಯೋ ವೈರಲ್!
ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ನಾಯಾಕ ವಿರಾಟ್ ಕೊಹ್ಲಿ ಸಿಡಿಸಿದ ಸಿಕ್ಸರ್ ಅನ್ನು ಬೌಂಡರಿ ಹೊರಗಿದ್ದ ಭದ್ರತಾ ಸಿಬ್ಬಂದಿ ಕ್ಯಾಚ್ ಹಿಡಿದಿದ್ದು ಆತನ...
ಸಿಡ್ನಿ: ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ನಾಯಾಕ ವಿರಾಟ್ ಕೊಹ್ಲಿ ಸಿಡಿಸಿದ ಸಿಕ್ಸರ್ ಅನ್ನು ಬೌಂಡರಿ ಹೊರಗಿದ್ದ ಭದ್ರತಾ ಸಿಬ್ಬಂದಿ ಕ್ಯಾಚ್ ಹಿಡಿದಿದ್ದು ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ.
ಸಿಡ್ನಿಯಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ಗಳಿಸುವ ಮೂಲಕ ಸರಣಿಯನ್ನು ಸಮಬಲ ಮಾಡಿಕೊಂಡಿತು. ಇದೇ ಪಂದ್ಯದ 17ನೇ ಓವರಿನ 3ನೇ ಎಸೆತದಲ್ಲಿ ಕೊಹ್ಲಿ ಸಿಕ್ಸರ್ ಬಾರಿಸಿದರು. ಚೆಂಡು ತಮ್ಮ ಕಡೆ ಬರುತ್ತಿದ್ದುದ್ದನ್ನು ಗಮನಿಸಿದ ಭದ್ರತಾ ಸಿಬ್ಬಂದಿ ಓಡಿ ಬಂದು ಚೆಂಡನ್ನು ಹಿಡಿದರು.
ಕ್ಯಾಚ್ ಹಿಡಿದ ಕೂಡಲೇ ಭದ್ರತಾ ಸಿಬ್ಬಂದಿ ಖುಷಿಯಲ್ಲಿ ತೇಲಾಡಿದರು. ಇದೇ ವೇಳೆ ಕ್ರೀಡಾಂಗಣದಲ್ಲಿ ನೆರೆದಿದ್ದ ಪ್ರೇಕ್ಷಕರೊಂದಿಗೆ ಖುಷಿಯಿಂದ ಕೈ ತಟ್ಟುವ ಮೂಲಕ ಸಂಭ್ರಮಿಸಿದರು. ಈ ವಿಡಿಯೋ ಇದೀಗ ವೈರಲ್ ಆಗಿದೆ.