ಏಷ್ಯಾ ಕಪ್‌ನಿಂದ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಿದ್ದೇಕೆ, ಪ್ರಧಾನ ಕೋಚ್ ರವಿಶಾಸ್ತ್ರಿ ಹೇಳಿದ್ದೇನು!

2018ರ ಏಷ್ಯಾಕಪ್ ಚಾಂಪಿಯನ್ ಆಗಿ ಟೀಂ ಇಂಡಿಯಾ ಹೊರಹೊಮ್ಮಿದೆ. ಇನ್ನು ಟೀಂ ಇಂಡಿಯಾವನ್ನು ವಿರಾಟ್ ಕೊಹ್ಲಿ ಬದಲಿಗೆ ರೋಹಿತ್ ಶರ್ಮಾ ಮುನ್ನಡೆಸಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು...
ರವಿಶಾಸ್ತ್ರಿ, ವಿರಾಟ್ ಕೊಹ್ಲಿ
ರವಿಶಾಸ್ತ್ರಿ, ವಿರಾಟ್ ಕೊಹ್ಲಿ
ಮುಂಬೈ: 2018ರ ಏಷ್ಯಾಕಪ್ ಚಾಂಪಿಯನ್ ಆಗಿ ಟೀಂ ಇಂಡಿಯಾ ಹೊರಹೊಮ್ಮಿದೆ. ಇನ್ನು ಟೀಂ ಇಂಡಿಯಾವನ್ನು ವಿರಾಟ್ ಕೊಹ್ಲಿ ಬದಲಿಗೆ ರೋಹಿತ್ ಶರ್ಮಾ ಮುನ್ನಡೆಸಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. 
ಏಷ್ಯಾಕಪ್ ನಲ್ಲಿ ವಿರಾಟ್ ಕೊಹ್ಲಿ ವಿಶ್ರಾಂತಿ ನೀಡಿದ್ದು ಯಾಕೆ ಅಂತ ತಂಡದ ಪ್ರಧಾನ ಕೋಚ್ ರವಿಶಾಸ್ತ್ರಿ ರಹಸ್ಯ ಬಿಚ್ಚಿಟ್ಟಿದ್ದಾರೆ. ಇಂಗ್ಲೆಂಡ್ ವಿರುದ್ಧದ ಸುದೀರ್ಘ ಪ್ರವಾಸದಲ್ಲಿ ವಿರಾಟ್ ಕೊಹ್ಲಿ ಟಿ20, ಏಕದಿನ ಹಾಗೂ ಐದು ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಸತತ ಕ್ರಿಕೆಟ್ ಪಂದ್ಯಗಳಲ್ಲಿ ಆಡಿದ್ದರಿಂದ ಅವರಿಗೆ ವಿಶ್ರಾಂತಿಯ ಅವಶ್ಯಕತೆ ಇತ್ತು. ಈ ನಿಟ್ಟಿನಲ್ಲಿ ಅವರಿಗೆ ಮಾನಸಿಕ ನೆಮ್ಮದಿ ನೀಡುವ ಉದ್ದೇಶದಿಂದ ಏಷ್ಯಾ ಕಪ್ ಟೂರ್ನಿಯಿಂದ ವಿಶ್ರಾಂತಿ ನೀಡಲಾಗಿತ್ತು ಎಂದು ಹೇಳಿದ್ದಾರೆ. 
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಗಾಯದ ಸಮಸ್ಯೆಗೆ ಗುರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಸತತ ಪಂದ್ಯಗಳನ್ನು ಆಡುವುದರಿಂದ ಇದು ಅವರ ಪ್ರದರ್ಶನದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಗಳಿತ್ತು. 
ಏಷ್ಯಾ ಕಪ್ ತಂಡದಿಂದ ಕೊಹ್ಲಿಗೆ ವಿಶ್ರಾಂತಿ ನೀಡಿದ್ದಕ್ಕಾಗಿ ಕ್ರೀಡಾಭಿಮಾನಿಗಳು, ಕೆಲ ಹಿರಿಯ ಕ್ರಿಕೆಟ್ ಆಟಗಾರರು ಬಿಸಿಸಿಐ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಮಹತ್ವದ ಟೂರ್ನಿಯಿಂದ ಅವರಿಗೆ ವಿಶ್ರಾಂತಿ ನೀಡಿರುವುದು ಯಾಕೆ ಎಂಬ ಪ್ರಶ್ನಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com