ವಿಜಯ್ ಹಜಾರೆ ಕ್ವಾರ್ಟರ್ ಫೈನಲ್‌ನಲ್ಲಿ ಜಾರ್ಖಂಡ್ ಪರ ಎಂಎಸ್ ಧೋನಿ ಕಣಕ್ಕೆ: ವರದಿ

ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ವಿಜಯ್ ಹಜಾರೆ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಜಾರ್ಖಂಡ್ ಪರ ಕಣಕ್ಕಿಳಿಯಲಿದ್ದಾರೆ ಎಂದು ವರದಿಯಾಗಿದೆ...
ಎಂಎಸ್ ಧೋನಿ
ಎಂಎಸ್ ಧೋನಿ
Updated on
ನವದೆಹಲಿ: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ವಿಜಯ್ ಹಜಾರೆ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಜಾರ್ಖಂಡ್ ಪರ ಕಣಕ್ಕಿಳಿಯಲಿದ್ದಾರೆ ಎಂದು ವರದಿಯಾಗಿದೆ. 
ಏಷ್ಯಾ ಕಪ್ ನಿಂದ ಮರಳಿದ ಬಳಿಕ ಎಂಎಸ್ ಧೋನಿ ಜಾರ್ಖಂಡ್ ತಂಡದೊಂದಿಗೆ ಅಭ್ಯಾಸ ನಡೆಸುತ್ತಿದ್ದಾರೆ. ಇಲ್ಲಿಯವರೆಗೂ ಯಾವುದೇ ಲೀಗ್ ಪಂದ್ಯಗಳಲ್ಲಿ ಆಡಿಲ್ಲ. ಆದರೆ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಜಾರ್ಖಂಡ್ ಪರ ಕಣಕ್ಕಿಳಿಯುವ ಸಾಧ್ಯತೆ ಇದೆ. 
ಪ್ರಸಕ್ತ ವರ್ಷದಲ್ಲಿ ಎಂಎಸ್ ಧೋನಿ ಟೀಂ ಇಂಡಿಯಾ ಪರವಾಗಿ 15 ಏಕದಿನ ಮತ್ತು 7 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನು ಮಾತ್ರ ಆಡಿದ್ದಾರೆ. ಇನ್ನು 22 ದಿನಗಳಿಂದ ಧೋನಿ ವಿಶ್ರಾಂತಿಯಲ್ಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com