ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ(ಸಿಇಒ) ರಾಹುಲ್ ಜೋಹ್ರಿಗೆ ಮತ್ತೊಂದು ಹಿನ್ನಡೆಯಾಗಿದೆ...
ಹೈದರಾಬಾದ್: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ(ಸಿಇಒ) ರಾಹುಲ್ ಜೋಹ್ರಿಗೆ ಮತ್ತೊಂದು ಹಿನ್ನಡೆಯಾಗಿದೆ.
ಪ್ರಕರಣದ ಕುರಿತು ವಿವರಣೆ ನೀಡಲು ಹೆಚ್ಚಿನ ಕಾಲಾವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬಿಸಿಸಿಐ ಆಡಳಿತ ಸಮಿತಿ ತಿರಸ್ಕರಿಸಿದೆ. ಈ ಹಿನ್ನೆಲೆಯಲ್ಲಿ ಜೋಹ್ರಿ ತಮ್ಮ ವಕೀಲರೊಂದಿಗೆ ಚರ್ಚಿಸುತ್ತಿದ್ದು ಸದ್ಯದಲ್ಲೇ ಆಡಳಿತ ಸಮಿತಿ ಮುಂದೆ ಹಾಜರಾಗಲಿದ್ದಾರೆ.
ಈ ಕಾರಣ, ಮಂಗಳವಾರದಿಂದ ಸಿಂಗಾಪುರದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಸಭೆಗೆ ಜೋಹ್ರಿ ಗೈರಾಗಲಿದ್ದು ಅವರ ಬದಲು ಕಾರ್ಯದರ್ಶಿ ಅಮಿತಾಭ್ ಚೌಧರಿ ಬಿಸಿಸಿಐ ಅನ್ನು ಪ್ರತಿನಿಧಿಸಲಿದ್ದಾರೆ.