ಭರ್ಜರಿ ಬ್ಯಾಟಿಂಗ್: ದಾಖಲೆಯ 36ನೇ ಶತಕ ಸಿಡಿಸಿದ ವಿರಾಟ್ ಕೊಹ್ಲಿ!

ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ದಾಖಲೆಯ ಶತಕ ಸಿಡಿಸಿದ್ದಾರೆ...
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
Updated on: 
ಗುವಾಹಟಿ: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ದಾಖಲೆಯ ಶತಕ ಸಿಡಿಸಿದ್ದಾರೆ. 
ಬರ್ಸಾಪರ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 88 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ. ಈ ಮೂಲಕ ಏಕದಿನ ಪಂದ್ಯದಲ್ಲಿ ಕೊಹ್ಲಿ ದಾಖಲೆಯ 36ನೇ ಶತಕ ಸಿಡಿಸಿದ್ದಾರೆ. 
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಏಕದಿನ ಪಂದ್ಯದಲ್ಲಿ ಕಡಿಮೆ ಇನ್ನಿಂಗ್ಸ್ ನಲ್ಲಿ ಅತೀ ವೇಗವಾಗಿ 36ನೇ ಶತಕವನ್ನು ಪೂರೈಸಿದ ಮೊದಲ ಆಟಗಾರನಾಗಿದ್ದಾರೆ. ಇನ್ನು ಒಟ್ಟಾರೆ 49 ಏಕದಿನ ಶತಕ ಸಿಡಿಸಿರುವ ಟೀಂ ಇಂಡಿಯಾದ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು ಅಗ್ರಸ್ಥಾನದಲ್ಲಿದ್ದಾರೆ. 36 ಶತಕಗಳೊಂದಿಗೆ ವಿರಾಟ್ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದಾರೆ.
ವಿರಾಟ್ ಕೊಹ್ಲಿ 36ನೇ ಶತಕ ಸಿಡಿಸುವ ಮೂಲಕ ನಾಯಕನಾಗಿ ಅತೀ ಹೆಚ್ಚು ಶತಕ ಸಿಡಿಸಿದ ಎರಡನೇ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com