ಟೀಂ ಇಂಡಿಯಾ ವೇಗಿಗಳಿಗೆ ಬೆದರಿದ ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳು, 3ನೇ ದಿನದಂತ್ಯಕ್ಕೆ 260/8
ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್ ಗಳು ಮಿಂಚಿನ ದಾಳಿ ನಡೆಸಿದ್ದು 3ನೇ ದಿನದಂತ್ಯಕ್ಕೆ ಇಂಗ್ಲೆಂಡ್ 8 ವಿಕೆಟ್ ಕಳೆದುಕೊಂಡು 260 ರನ್ ಪೇರಿಸಿದೆ...
ಸೌತಾಂಪ್ಟನ್: ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್ ಗಳು ಮಿಂಚಿನ ದಾಳಿ ನಡೆಸಿದ್ದು 3ನೇ ದಿನದಂತ್ಯಕ್ಕೆ ಇಂಗ್ಲೆಂಡ್ 8 ವಿಕೆಟ್ ಕಳೆದುಕೊಂಡು 260 ರನ್ ಪೇರಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 246 ರನ್ ಗಳಿಗೆ ಆಲೌಟ್ ಆಯಿತು. ನಂತರ ಮೊದಲ ಇನ್ನಿಂಗ್ಸ್ ಆರಂಭಿಸಿದ ಭಾರತ 273 ರನ್ ಗಳಿಗೆ ಆಲೌಟ್ ಆಯಿತು. ನಂತರ ಎರಡನೇ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡ 8 ವಿಕೆಟ್ ಕಳೆದುಕೊಂಡು 260 ರನ್ ಪೇರಿಸಿದ್ದು 233 ರನ್ ಗಳ ಮುನ್ನಡೆ ಸಾಧಿಸಿದೆ.
ಎರಡನೇ ಇನ್ನಿಂಗ್ಸ್ ನಲ್ಲಿ ಜೋಸ್ ಬಟ್ಲರ್ 69, ನಾಯಕ ಜೋ ರೂಟ್ 48, ಕೀಟನ್ ಜೆನಿಂಗ್ಸ್ 36, ಬೆನ್ ಸ್ಟೋಕ್ಸ್ 30 ಹಾಗೂ ಸ್ಯಾನ್ ಕರ್ರನ್ ಅಜೇಯ 37 ರನ್ ಗಳಿಸಿದ್ದಾರೆ.
ಕರ್ರನ್ ಹಾಗೂ ಸ್ಟುವರ್ಟ್ ಬ್ರಾಡ್ ನಾಲ್ಕನೇ ದಿನದಾಟವನ್ನು ಆರಂಭಿಸಲಿದ್ದು ಇನ್ನುಳಿಂದ ಎರಡು ವಿಕೆಟ್ ಗಳನ್ನು ಶೀಘ್ರವಾಗಿ ಪಡೆದರೇ ನಂತರ ಇಂಗ್ಲೆಂಡ್ ನೀಡಿದ ಗುರಿಯನ್ನು ಬಾರಿಸಬೇಕಿದೆ.
ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಇಂಗ್ಲೆಂಡ್ 2-1 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು ಈ ಪಂದ್ಯವನ್ನು ಭಾರತ ಗೆದ್ದರೆ ಸರಣಿಯನ್ನು ಜೀವಂತ ಉಳಿಸಿಕೊಳ್ಳಲಿದೆ.