ಈಗಾಗಲೇ ತಂಡದಲ್ಲಿ ಸಾಕಷ್ಟು ಬದಲಾವಣೆ ತರಲಾಗಿದ್ದು, ಈ ಹಿಂದಿನ ಕೋಚ್ ಡೇನಿಯಲ್ ವೆಟೋರಿ ಅವರನ್ನು ಕೈ ಬಿಟ್ಟು ಅವರ ಸ್ಥಾನಕ್ಕೆ ಗ್ಯಾರಿ ಕರ್ಸ್ಟರ್ನ್ ಮತ್ತು ಬೌಲಿಂಗ್ ಕೋಚ್ ಆಗಿ ಮಾಜಿ ಕ್ರಿಕೆಟಿಗ ಆಶಿಶ್ ನೆಹ್ರಾ ಅವರನ್ನು ನೇಮಕ ಮಾಡಲಾಗಿದೆ. ಅಂತೆಯೇ ಕೋಚಿಂಗ್ ಸಿಬ್ಬಂದಿಗಳನ್ನೂ ಕೂಡ ಬದಲಾವಣೆ ಮಾಡಲಾಗಿದೆ. ಇದೀಗ ಇವೆಲ್ಲವನ್ನೂ ಮೀರಿದ ಭರ್ಜರಿ ಸರ್ಜರಿಗೆ ಆರ್ ಸಿಬಿ ಫ್ರಾಂಚೈಸಿಗಳು ಮುಂದಾಗಿದ್ದು, ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿಯನ್ನೇ ತಂಡದ ನಾಯಕ ಸ್ಥಾನದಿಂದ ಕೆಳಗಿಳಿಸುವ ಕುರಿತು ಚರ್ಚೆ ನಡೆದಿದೆ ಎಂದು ಹೇಳಲಾಗುತ್ತಿದೆ.