ಏಷ್ಯಾ ಕಪ್: ಪಾಕ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯಗೆ ಗಂಭೀರ ಗಾಯ

ದುಬೈನಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ....
ಹಾರ್ದಿಕ್ ಪಾಂಡ್ಯ
ಹಾರ್ದಿಕ್ ಪಾಂಡ್ಯ
ದುಬೈ: ದುಬೈನಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತದ ಹಾರ್ದಿಕ್ ಪಾಂಡ್ಯ ಅವರು ಗಂಭೀರವಾಗಿ ಗಾಯಗೊಂಡಿದ್ದು, ಟೀಂ ಇಂಡಿಯಾಗೆ ಹಿನ್ನಡೆಯಾಗಿದೆ. 
ಆಲ್‌ ರೌಂಡರ್ ಹಾರ್ದಿಕ್ ಪಾಂಡ್ಯ ಅವರಿಗೆ ಬೌಲಿಂಗ್ ಮಾಡುವಾಗ ಬೆನ್ನು ನೋವು ಕಾಣಿಸಿಕೊಂಡು, ಪಿಚ್ ನಲ್ಲೇ ಕುಸಿದು ಬಿದ್ದರು. ವೈದ್ಯಕೀಯ ಸಿಬ್ಬಂದಿ ಕೂಡಲೇ ಅವರನ್ನು ಸ್ಟ್ರೆಚರ್ ನಲ್ಲಿ ಮಲಗಿಸಿ ಹೊರಗೆ ಕರೆದುಕೊಂಡು ಹೋದರು.
ಪಾಕ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಪಾತ್ರ ಮುಖ್ಯವೆನಿಸಿತ್ತು. ಆದರೆ ಬೌಲಿಂಗ್ ಮಾಡುವಾಗ 18ನೇ ಓವರ್ ನಲ್ಲಿ ಗಾಯಕ್ಕೊಳಗಾದ ಹಿನ್ನಲೆಯಲ್ಲಿ ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ.
ಸದ್ಯ ಹಾರ್ದಿಕ್ ಪಾಂಡ್ಯ ಬದಲಿಗೆ ಮನೀಶ್ ಪಾಂಡ್ಯ ಅವರು ಫೀಲ್ಡಿಂಗ್ ಮಾಡುತ್ತಿದ್ದು, 25ನೇ ಓವರ್ ನಲ್ಲಿ ಪಾಕಿಸ್ತಾನ ನಾಯಕ ಸರ್ಫರಾಜ್ ಅಹ್ಮದ್ ಅವರ ಮಹತ್ವದ ಕ್ಯಾಚ್ ಪಡೆದು ಮಿಂಚಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com