ವಿಶ್ವದಾದ್ಯಂತ ಕ್ರಿಕೆಟ್ ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯುತ್ತಿರುವ ಘಳಿಗೆ ಕೊನೆಗೂ ಸಮೀಪಿಸಿದ್ದು, ಏಷ್ಯಾ ಕಪ್ ಟೂರ್ನಿಯಲ್ಲಿ ಬಹು ನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ನಡುವಣ ಹೈವೋಲ್ಟೇಜ್ ಪಂದ್ಯ ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಬುಧವಾರ ನಡೆಯಲಿದೆ. ಇಂದು ಸಂಜೆ 5 ಗಂಟೆಗೆ ಪಂದ್ಯ ಆರಂಭವಾಗಲಿದ್ದು, ಸಾಂಪ್ರದಾಯಿಕ ಎದುರಾಳಿಗಳ ನಡುವಿನ ಪಂದ್ಯ ಕದನ ಕುತೂಹಲ ಮೂಡಿಸಿದೆ.