ಹೌದು.. ಮಂಗಳವಾರ ದುಬೈನಲ್ಲಿ ನಡೆದ ಏಷ್ಯಾಕಪ್ 2018 ಟೂರ್ನಿಯಲ್ಲಿ ಭಾರತದ ವಿರುದ್ಧ ಕೆಚ್ಚೆದೆಯ ಆಟವಾಡಿ 26 ರನ್ ಗಳ ವಿರೋಚಿತ ಸೋಲು ಕಂಡಿದ್ದ ಹಾಂಕಾಂಗ್ ಗೆ ಟೀಂ ಆಟಗಾರರು ಫಿದಾ ಆಗಿದ್ದಾರೆ. ಇದೇ ಕಾರಣಕ್ಕೆ ಪಂದ್ಯ ಮುಕ್ತಾಯದ ಬಳಿಕ ಅವರ ಡ್ರೆಸಿಂಗ್ ರೂಂಗೆ ತೆರಳಿ ಆಟಗಾರರು ಅವರನ್ನು ಅಭಿನಂದಿಸಿದ್ದಾರೆ. ಆ ಮೂಲಕ ಟೀಂ ಆಟಗಾರರು ಕ್ರೀಡಾ ಸ್ಫೂರ್ತಿ ಮೆರೆದಿದ್ದಾರೆ. ಪಂದ್ಯ ಮುಗಿದ ತಕ್ಷಣ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ, ತಂಡದ ನಾಯಕ ರೋಹಿತ್ ಶರ್ಮಾ, ಆರಂಭಿಕ ಆಟಗಾರ ಶಿಖರ್ ಧವನ್, ದಿನೇಶ್ ಕಾರ್ತಿಕ್ ಸೇರಿದಂತೆ ಇತರ ಆಟಗಾರರು ಹಾಂಕಾಂಗ್ ಆಟಗಾರರ ಡ್ರೆಸ್ಸಿಂಗ್ ರೂಂಗೆ ತೆರಳಿ ಅವರೊಂದಿಗೆ ಮಾತುಕತೆ ನಡೆಸಿ ಅವರಿಗೆ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಿದ್ದಾರೆ. ಜತೆಗೆ ಅವರೊಂದಿಗೆ ಸೆಲ್ಫಿ ಕೂಡ ತೆಗೆದುಕೊಂಡು ಸಂಭ್ರಮಿಸಿದ್ದಾರೆ.