ಪಾಕ್ ವಿರುದ್ಧದ ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಪರ ದಾಖಲಾಗುವ 4 ಐತಿಹಾಸಿಕ ದಾಖಲೆಗಳು ಯಾವುವು ಗೊತ್ತ?

ಏಷ್ಯಾಕಪ್ ಕ್ರಿಕೆಟ್ ಪಂದ್ಯಾವಳಿಯ ಸೂಪರ್ ಪೋರ್ ನ ಪಾಕಿಸ್ತಾನ ವಿರುದ್ಧದ ಇಂದಿನ ಪಂದ್ಯ ಹಲವು ಐತಿಹಾಸಿಕ ದಾಖಲೆಗಳಿಗೆ ಸಾಕ್ಷಿಯಾಗಲಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ದುಬೈ: ಏಷ್ಯಾಕಪ್ ಕ್ರಿಕೆಟ್ ಪಂದ್ಯಾವಳಿಯ ಸೂಪರ್ ಪೋರ್ ನ ಪಾಕಿಸ್ತಾನ ವಿರುದ್ಧದ ಇಂದಿನ ಪಂದ್ಯ ಹಲವು ಐತಿಹಾಸಿಕ ದಾಖಲೆಗಳಿಗೆ ಸಾಕ್ಷಿಯಾಗಲಿದೆ. 
* 50ನೇ ವಿಕೆಟ್ ಸನಿಹದಲ್ಲಿರುವ ಯುವ ಸ್ಪಿನ್ನರ್ ಯಜುವೇಂದ್ರ ಚಹಾಲ್
ಏಕದಿನ ಕ್ರಿಕೆಟ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಯುವ ಸ್ಪಿನ್ನರ್ ಯಜುವೇಂದ್ರ ಚಹಾಲ್ 25 ಪಂದ್ಯಗಳ ಪೈಕಿ 45 ವಿಕೆಟ್ ಗಳನ್ನು ಪಡೆದಿದ್ದು ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ 5 ವಿಕೆಟ್ ಪಡೆದರೇ 50 ವಿಕೆಟ್ ಪಡೆದ ಸಾಧನೆ ಮಾಡಲಿದ್ದಾರೆ. 
* 800 ವಿಕೆಟ್ ದಾಖಲೆ ಸನಿಹದಲ್ಲಿರುವ ವಿಕೆಟ್ ಕೀಪರ್ ಎಂಎಸ್ ಧೋನಿ
ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ವಿಕೆಟ್ ಹಿಂದೆ ಹಲವು ದಾಖಲೆಗಳನ್ನು ಮಾಡಿದ್ದಾರೆ. ಕ್ಯಾಚ್ ಗಳು, ಸ್ಟಂಪಿಂಗ್, ರನ್ ಔಟ್ ಗಳನ್ನು ಮಾಡಿರುವ ಧೋನಿ ಒಟ್ಟಾರೆ 795 ವಿಕೆಟ್ ಗಳನ್ನು ಪಡೆದಿದ್ದಾರೆ. ಈ ಪಂದ್ಯದಲ್ಲಿ ವಿಕೆಟ್ ಹಿಂದೆ ಐದು ವಿಕೆಟ್ ಗಳನ್ನು ಪಡೆದರೆ ಈ ಸಾಧನೆ ಮಾಡಲಿರುವ ಮೊದಲ ಭಾರತೀಯ ಆಟಗಾರ ಎಂಬ ಖ್ಯಾತಿಗೆ ಧೋನಿ ಭಾಜನರಾಗಲಿದ್ದಾರೆ. 
* 4 ವಿಕೆಟ್ ಕಬಳಿಸಿದರೆ ಒಟ್ಟು 100 ವಿಕೆಟ್ ಪಡೆದ ಸಾಧನೆ ಮಾಡಲಿರುವ ಭುವಿ
ಟೀಂ ಇಂಡಿಯಾದ ವೇಗಿ ಭುವನೇಶ್ವರ್ ಕುಮಾರ್ ಭಾರತ ಪರ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. 100 ವಿಕೆಟ್ ಪಡೆದ ಸಾಧನೆ ಮಾಡಲು ಭುವಿಗೆ ಇನ್ನು ನಾಲ್ಕು ವಿಕೆಟ್ ಗಳು ಮಾತ್ರ ಬೇಕಿದೆ. ಈ ಪಂದ್ಯದಲ್ಲಿ ನಾಲ್ಕು ವಿಕೆಟ್ ಪಡೆದರೆ 100 ವಿಕೆಟ್ ಪಡದೆ 19ನೇ ಭಾರತೀಯ ಬೌಲರ್ ಎಂಬ ಖ್ಯಾತಿಗೆ ಭುವಿ ಭಾಜನರಾಗಲಿದ್ದಾರೆ.
* ಟೀಂ ಇಂಡಿಯಾದ ಖಾಯಂ ನಾಯಕ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿರುವ ರೋಹಿತ್ ಶರ್ಮಾ ತಮ್ಮ ಉತ್ತಮ ನಾಯಕತ್ವದಿಂದ ಆಡಿದ ಮೂರು ಪಂದ್ಯಗಳಲ್ಲೂ ತಂಡ ಗೆಲ್ಲುವಂತೆ ಮಾಡಿದ್ದಾರೆ. ನಾಯಕತ್ವದ ಜೊತೆಗೆ ಬ್ಯಾಟಿಂಗ್ ನಲ್ಲೂ ಉತ್ತಮ ಪ್ರದರ್ಶನ ನೀಡುತ್ತಿರುವ ರೋಹಿತ್ ಶರ್ಮಾ ಎರಡು ಅರ್ಧ ಶತಕವನ್ನು ಸಿಡಿಸಿದ್ದಾರೆ. ಈ ಪಂದ್ಯದಲ್ಲಿ 94 ರನ್ ಬಾರಿಸಿದರೆ ರೋಹಿತ್ ಶರ್ಮಾ 7000 ರನ್ ಗಡಿ ದಾಟಲಿದ್ದಾರೆ. ಈ ಸಾಧನೆಯನ್ನು ರೋಹಿತ್ ಶರ್ಮಾ ಮಾಡಿದರೆ ಈ ಸಾಧನೆ ಮಾಡಿದ 8ನೇ ಭಾರತೀಯ ಆಟಗಾರನಾಗಿ ಹೊರಹೊಮ್ಮಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com