

ದುಬೈ : ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ - ಪಾಕಿಸ್ತಾನ ನಡುವಣ ಹಣಾಹಣಿ ಏರ್ಪಟ್ಟಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ನಿಗದಿತ 50 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 237 ರನ್ ಗಳಿಸಿದ್ದು, ಭಾರತ ಗೆಲ್ಲಲು 238 ರನ್ ಗಳ ಗುರಿ ನೀಡಿದೆ.