ಏಷ್ಯಾ ಕಪ್ 2018: ಪಾಕಿಸ್ತಾನ ವಿರುದ್ಧ ಭಾರತಕ್ಕೆ 9 ವಿಕೆಟ್ ಗಳ ಭರ್ಜರಿ ಜಯ!

ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ 9 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.
ಶಿಖರ್ ಧವನ್, ರೋಹಿತ್ ಶರ್ಮಾ
ಶಿಖರ್ ಧವನ್, ರೋಹಿತ್ ಶರ್ಮಾ
Updated on: 

ದುಬೈ : ಇಲ್ಲಿನ  ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ  ನಡೆದ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ   ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ  ಭಾರತ 9 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್  ಮಾಡಿದ ಪಾಕಿಸ್ತಾನ ನಿಗದಿತ 50 ಓವರ್ ಗಳಲ್ಲಿ  ಏಳು ವಿಕೆಟ್ ನಷ್ಟಕ್ಕೆ 237 ರನ್ ಗಳಿಸಿ,  ಭಾರತ ಗೆಲ್ಲಲು 238 ರನ್ ಗಳ ಗುರಿ ನೀಡಿತ್ತು.ಈ ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾ  ನಾಯಕ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಅವರ ಆಕರ್ಷಕ ಶತಕದ ನೆರವಿನಿಂದ 39. 3 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 238 ರನ್ ಗಳಿಸಿ ಗೆಲುವಿನ ನಗೆ ಬೀರಿತು.

ಇದಕ್ಕೂ ಮುನ್ನ ಪಾಕಿಸ್ತಾನ ಪರ ಶೂಯಬ್ ಮಲ್ಲಿಕ್  ನಾಲ್ಕು ಬೌಂಡರಿ ಹಾಗೂ  ಎರಡು ಸಿಕ್ಸರ್ ಮೂಲಕ ಭರ್ಜರಿ 78 ರನ್ ಗಳಿಸಿ  ಪಾಕಿಸ್ತಾನ ರನ್ ಹೆಚ್ಚಲು ಕಾರಣರಾದರು. ಉಳಿದಂತೆ ವಿಕೆಟ್ ಕೀಪರ್ ಸರ್ಪರಾಜ್ ಅಹಮದ್ 44, ಪಾಕರ್ ಜಾಮನ್ 31, ಅಸಿಪ್ ಆಲಿ 30 ರನ್ ಗಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com