ರಾಷ್ಟ್ರಪತಿಯಿಂದ 'ಖೇಲ್ ರತ್ನ' ಸ್ವೀಕರಿಸಿದ ವಿರಾಟ್ ಕೊಹ್ಲಿ, ಮೀರಾಬಾಯಿ ಚಾನು

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಕಾಮನ್ವೆಲ್ತ್ ಚಿನ್ನದ ಪದಕ ವಿಜೇತ ವೇಟ್​​​​ಲಿಫ್ಟರ್ ಮೀರಾಬಾಯ್...
ಪ್ರಶಸ್ತಿ ಸ್ವೀಕರಿಸುತ್ತಿರುವ ವಿರಾಟ್ ಕೊಹ್ಲಿ
ಪ್ರಶಸ್ತಿ ಸ್ವೀಕರಿಸುತ್ತಿರುವ ವಿರಾಟ್ ಕೊಹ್ಲಿ
Updated on: 
ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಕಾಮನ್ವೆಲ್ತ್ ಚಿನ್ನದ ಪದಕ ವಿಜೇತ ವೇಟ್​​​​ಲಿಫ್ಟರ್ ಮೀರಾಬಾಯ್ ಚಾನು ಅವರು ಮಂಗಳವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಕ್ರೀಡಾ ಕ್ಷೇತ್ರದ ಪ್ರತಿಷ್ಠಿತ ಪ್ರಶಸ್ತಿಯಾದ ರಾಜಿವ್ ಗಾಂಧಿ ಖೇಲ್ ರತ್ನಾ ಪ್ರಶಸ್ತಿಯನ್ನು ಸ್ವೀಕರಿಸಿದರು.
ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಕ್ರೀಡಾ ಸಾಧಕರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ರಾಮನಾಥ್ ಕೋವಿಂದ್ ಅವರು ವಿರಾಟ್ ಕೊಹ್ಲಿ ಹಾಗೂ ಮೀರಾಬಾಯಿ ಚಾನು ಅವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು.
ವಿರಾಟ್ ಕೊಹ್ಲಿ ಜೊತೆ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕೂಡ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.  
ಕಾಮನ್ ವೆಲ್ಸ್, ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಜಾವಲಿನ್ ಥ್ರೋವರ್ ನೀರಜ್ ಚೋಪ್ರಾ, ಓಟಗಾರ್ತಿ ಹಿಮಾ ದಾಸ್, ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂದಾನ, ಕನ್ನಡಿಗ ಟೆನಿಸ್ ಪಟು ರೋಹನ್ ಬೋಪಣ್ಣ ಸೇರಿದಂತೆ 20 ಕ್ರೀಡಾಪಟುಗಳು ಅರ್ಜುನ್ ಪ್ರಶಸ್ತಿ ಸ್ವೀಕರಿಸಿದರು.
ಬಾಕ್ಸಿಂಗ್ ಕೋಚ್ ಕನ್ನಡಿಗ ಚೆನಂದ ಅಚ್ಚಯ್ಯ ಕುಟ್ಟಪ್ಪ, ವೇಟ್‌ಲಿಫ್ಟರ್ ಕೋಚ್ ವಿಜಯ್ ಶರ್ಮಾ ಸೇರಿದಂತೆ 8 ಮಾರ್ಗದರ್ಶಕರು ದ್ರೋಣಾಚಾರ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಎಲ್ಲರಿಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com