ವಿಂಡೀಸ್ ಟೆಸ್ಟ್ ಸರಣಿಯಿಂದ ಧವನ್‌ಗೆ ಕೊಕ್? ಕನ್ನಡಿಗ ಮಾಯಾಂಕ್‌ಗೆ ಅವಕಾಶ?

ಇಂಗ್ಲೆಂಡ್ ನಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದರೂ ಪ್ರಸ್ತುತ ನಡೆಯುತ್ತಿರುವ ಏಷ್ಯಾಕಪ್ ಏಕದಿನ ಕೂಟದಲ್ಲಿ ಅದ್ಭುತವಾಗಿ ಆಡುತ್ತಿರುವ ಶಿಖರ್ ಧವನ್...
ಶಿಖರ್ ಧವನ್, ಮಾಯಾಂಕ್ ಅಗರ್ವಾಲ್
ಶಿಖರ್ ಧವನ್, ಮಾಯಾಂಕ್ ಅಗರ್ವಾಲ್
Updated on: 
ಮುಂಬೈ: ಇಂಗ್ಲೆಂಡ್ ನಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದರೂ ಪ್ರಸ್ತುತ ನಡೆಯುತ್ತಿರುವ ಏಷ್ಯಾಕಪ್ ಏಕದಿನ ಕೂಟದಲ್ಲಿ ಅದ್ಭುತವಾಗಿ ಆಡುತ್ತಿರುವ ಶಿಖರ್ ಧವನ್ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಿಂದ ಬಹುತೇಕ ಹೊರಬಿದ್ದಿದ್ದಾರೆ ಎಂದು ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ. 
ವಿಂಡೀಸ್ ವಿರುದ್ಧದ ಸರಣಿಗೆ ತಂಡಕ್ಕೆ ಹೊಸ ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಯುವ ಆಟಗಾರರಾದ ಮುಂಬೈನ ಪೃಥ್ವಿ ಶಾ ಹಾಗೂ ಕನ್ನಡಿಗ ಮಾಯಾಂಕ್ ಅಗರ್ವಾಲ್ ಗೆ ಸ್ಥಾನ ನೀಡಲಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. 
ಕಳೆದ ಬುಧವಾರ ತಂಡದ ಪೂರ್ಣ ಆಟಗಾರರ ಪಟ್ಟಿ ಪ್ರಕಟವಾಗಬೇಕಿತ್ತು. ಆದರೆ ಸೆಪ್ಟೆಂಬರ್ 28ರಂದು ಏಷ್ಯಾ ಕಪ್ ಫೈನಲ್ ಮುಗಿದ ಬಳಿಕ ಪಟ್ಟಿಯನ್ನು ಬಿಸಿಸಿಐ ಪ್ರಕಟಿಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com