ಸವ್ಯಸಾಚಿ ಸಚಿನ್ ರ ಮತ್ತೊಂದು ಅಪರೂಪದ ದಾಖಲೆ ಮುರಿದ ಕ್ಯಾಪ್ಟನ್ ವಿರಾಟ್ ಕೊಹ್ಲಿ

ಆಸ್ಟ್ರೇಲಿಯಾ ವಿರುದ್ಧ ಪರ್ತ್ ನಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ನಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ಟೆಸ್ಟ್ ಕ್ರಿಕೆಟ್ ವೃತ್ತಿ ಜೀವನದ 25ನೇ ಶತಕ ಸಿಡಿಸಿದ್ದು ಮಾತ್ರವಲ್ಲದೇ ಸವ್ಯಸಾಚಿ ಸಚಿನ್ ತೆಂಡೂಲ್ಕರ್ ಅವರ ಮತ್ತೊಂದು ಅಪರೂಪದ ದಾಖಲೆಯೊಂದನ್ನು ಮುರಿದಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಪರ್ತ್: ಆಸ್ಟ್ರೇಲಿಯಾ ವಿರುದ್ಧ ಪರ್ತ್ ನಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ನಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ಟೆಸ್ಟ್ ಕ್ರಿಕೆಟ್ ವೃತ್ತಿ ಜೀವನದ 25ನೇ ಶತಕ ಸಿಡಿಸಿದ್ದು ಮಾತ್ರವಲ್ಲದೇ ಸವ್ಯಸಾಚಿ ಸಚಿನ್ ತೆಂಡೂಲ್ಕರ್ ಅವರ ಮತ್ತೊಂದು ಅಪರೂಪದ ದಾಖಲೆಯೊಂದನ್ನು ಮುರಿದಿದ್ದಾರೆ.
ಹೌದು ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ನ 3ನೇ ದಿನದಾಟದಂದೂ ಕ್ಯಾಪ್ಟನ್ ವಿರಾಟ್ ಕೊಹ್ಲಿ ಬ್ಯಾಟಿಂಗ್ ಮುಂದುವರೆದಿದ್ದು, 221 ಎಸೆತಗಳಲ್ಲಿ ಕೊಹ್ಲಿ ಶತಕ ಸಿಡಿಸಿದ್ದಾರೆ. ಕೊಹ್ಲಿಗೆ ಇದು ಟೆಸ್ಟ್ ಕ್ರಿಕೆಟ್ ನ 25ನೇ ಶತಕವಾಗಿದ್ದು, ಈ ಶತಕದ ಮೂಲಕ ಕೊಹ್ಲಿ ಅಪರೂಪದ ಮೈಲುಗಲ್ಲು ಸಾಧಿಸಿದ್ದಾರೆ.
ಹೌದು ಈ ಶತಕದ ಮೂಲಕ ಕೊಹ್ಲಿ ಭಾರತದ ಪರ ಅತ್ಯಂತ ಕಡಿಮೆ ಇನ್ನಿಂಗ್ಸ್ ನಲ್ಲಿ25ನೇ ಶತಕ ಸಿಡಿಸಿದ ಮೊದಲ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. ಅಲ್ಲದೆ ಈ ದಾಖಲೆಯನ್ನು ಹೊಂದಿದ್ದ ಸವ್ಯಸಾಚಿ ಸಚಿನ್ ರನ್ನೂ ಕೊಹ್ಲಿ ಹಿಂದಿಕ್ಕಿದ್ದಾರೆ. 25ನೇ ಶತಕ್ಕಾಗಿ ಕೊಹ್ಲಿ ತೆಗೆದು ಕೊಂಡಿರುವುದು 127 ಇನ್ನಿಂಗ್ಸ್ ಗಳಾದರೆ, ಇದೇ ಸಾಧನೆಗಾಗಿ ಸಚಿನ್ 130ಇನ್ನಿಂಗ್ಸ್ ಗಳನ್ನು ತೆಗೆದುಕೊಂಡಿದ್ದರು.
ಇನ್ನು ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಕ್ರಿಕೆಟ್ ದಂತಕಥೆ ಡಾನ್ ಬ್ರಾಡ್ಮನ್ ಮೊದಲ ಸ್ಥಾನದಲ್ಲಿದ್ದು, ಬ್ರಾಡ್ಮನ್ ಕೇವಲ 68 ಇನ್ನಿಂಗ್ಸ್ ಗಳಲ್ಲಿ 25 ಶತಕ ಸಿಡಿಸಿದ್ದಾರೆ. ಪಟ್ಟಿಯಲ್ಲಿ ಭಾರತೀಯ ಕ್ರಿಕೆಟ್ ಮತ್ತೋರ್ವ ಲೆಜೆಂಡ್ ಆಟಗಾರ ಸುನಿಲ್ ಗವಾಸ್ಕರ್ 4ನೇ ಸ್ಥಾನಗಲ್ಲಿದ್ದು, ಸನ್ನಿ 138 ಇನ್ನಿಂಗ್ಸ್ ಗಳಲ್ಲಿ 25 ಶತಕ ಸಿಡಿಸಿದ್ದಾರೆ.
ಭಾರತದ ಪರ ಕಾಂಗರೂಗಳ ವಿರುದ್ಧ ಅತೀ ಹೆಚ್ಚು ಶತಕ, ಕೊಹ್ಲಿಗೆ 3ನೇ ಸ್ಥಾನ
ಇನ್ನು ಭಾರತದ ಪರ ಆಸ್ಟ್ರೇಲಿಯಾ ತಂಡದ ವಿರುದ್ಧ ಅತೀ ಹೆಚ್ಚು ಶತಕ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ಕೊಹ್ಲಿ 3ನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದು, ಇದು ಕೊಹ್ಲಿ ಕಾಂಗರೂಗಳ ವಿರುದ್ಧ 7ನೇ ಶತಕವಾಗಿದೆ. ಆ ಮೂಲಕ ಕೊಹ್ಲಿ 6 ಶತಕ ಸಿಡಿಸಿರುವ ವಿವಿಎಸ್ ಲಕ್ಷ್ಮಣ್ ರನ್ನು ಹಿಂದಿಕ್ಕಿದ್ದು, ಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದ್ದಾರೆ. ಇನ್ನು ಪಟ್ಟಿಯಲ್ಲಿ 11 ಶತಕ ಸಿಡಿಸಿರುವ ಸಚಿನ್ ಅಗ್ರ ಸ್ಥಾನದಲ್ಲಿ ಮುಂದುವರೆದಿದ್ದು, 8 ಶತಕಗಳೊಂದಿಗೆ ಗವಾಸ್ಕರ್ 2ನೇ ಸ್ಥಾನದಲ್ಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com