ಕ್ರಿಕೆಟ್ ದಿಗ್ಗಜ ಸಚಿನ್ ದಾಖಲೆ ಚಿಂದಿ ಮಾಡ್ತಾರಾ ವಿರಾಟ್ ಕೊಹ್ಲಿ?

ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಟೆಸ್ಟ್ ಸರಣಿಯನ್ನು ಆಡಲಿದ್ದು ವೇಗವಾಗಿ ಶತಕಗಳನ್ನು ಸಿಡಿಸಿ ಹಲವು ದಾಖಲೆಗಳನ್ನು ಧೂಳಿಪಟ ಮಾಡಿರುವ ವಿರಾಟ್...

Published: 28th November 2018 12:00 PM  |   Last Updated: 28th November 2018 04:06 AM   |  A+A-


Virat Kohli, Sachin Tendulkar

ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್

Posted By : VS
Source : Online Desk
ಸಿಡ್ನಿ: ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಟೆಸ್ಟ್ ಸರಣಿಯನ್ನು ಆಡಲಿದ್ದು ವೇಗವಾಗಿ ಶತಕಗಳನ್ನು ಸಿಡಿಸಿ ಹಲವು ದಾಖಲೆಗಳನ್ನು ಧೂಳಿಪಟ ಮಾಡಿರುವ ವಿರಾಟ್ ಕೊಹ್ಲಿಗೆ ಇದೀಗ ಆಸೀಸ್ ನೆಲದಲ್ಲಿ ಸಚಿನ್ ದಾಖಲೆಯನ್ನು ಬ್ರೇಕ್ ಮಾಡುವ ಅವಕಾಶವಿದೆ. 

ಆಸ್ಟ್ರೇಲಿಯಾ ನೆಲದಲ್ಲಿ 62ರ ಸರಾಸರಿಯಲ್ಲಿ 992 ರನ್ ಬಾರಿಸಿರುವ ವಿರಾಟ್ ಕೊಹ್ಲಿ ಅದಾಗಲೇ ಐದು ಶತಕಗಳನ್ನು ಸಿಡಿಸಿದ್ದಾರೆ. ಇನ್ನು ಒಂದು ಶತಕ ಸಿಡಿಸಿದರೆ ಕೊಹ್ಲಿ ಸಚಿನ್ ದಾಖಲೆಯನ್ನು ಮುರಿಯಲಿದ್ದಾರೆ. 

ಆಸ್ಟ್ರೇಲಿಯಾ ನೆಲದಲ್ಲಿ ಸಚಿನ್ ತೆಂಡೂಲ್ಕರ್ 6 ಶತಕ ಸಿಡಿಸಿ ಮೊದಲ ಸ್ಥಾನದಲ್ಲಿದ್ದಾರೆ. ಈ ಸಾಧನೆ ಮಾಡಲು ಸಚಿನ್ 20 ಪಂದ್ಯಗಳನ್ನು ತೆಗೆದುಕೊಂಡಿದ್ದರು. ಆದರೆ ಕೊಹ್ಲಿ ಕೇವಲ 8 ಪಂದ್ಯಗಳಲ್ಲಿ 5 ಶತಕ ಬಾರಿಸಿದ್ದಾರೆ. 

ಇನ್ನು 11 ಪಂದ್ಯಗಳಲ್ಲಿ 5 ಶತಕಗಳನ್ನು ಸಿಡಿಸಿ ಸುನೀಲ್ ಗವಾಸ್ಕರ್ ಎರಡನೇ ಸ್ಥಾನದಲ್ಲಿದ್ದಾರೆ. 15 ಪಂದ್ಯಗಳಲ್ಲಿ ನಾಲ್ಕು ಶತಕ ಸಿಡಿಸಿ ವಿವಿಎಸ್ ಲಕ್ಷ್ಮಣ್ ನಾಲ್ಕನೇ ಸ್ಥಾನದಲ್ಲಿದ್ದಾರೆ.
Stay up to date on all the latest ಕ್ರಿಕೆಟ್ news with The Kannadaprabha App. Download now
facebook twitter whatsapp