ಧೋನಿ 'ಮಾಸ್ಟರ್ ಸ್ಟ್ರೋಕ್', ರಾಜಸ್ಥಾನ್ ವಿರುದ್ಧ ಚೆನ್ನೈಗೆ ಹ್ಯಾಟ್ರಿಕ್ ಗೆಲುವು

ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಅಮೋಘ ಅರ್ಧ ಶತಕ(70*)ದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಜಸ್ಥಾನ್ ರಾಯಲ್ಸ್...
ಎಂಎಸ್ ಧೋನಿ
ಎಂಎಸ್ ಧೋನಿ
Updated on: 
ಚೆನ್ನೈ: ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಅಮೋಘ ಅರ್ಧ ಶತಕ(70*)ದ  ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ 8 ರನ್ ಗಳ ರೋಚಕ ಗೆಲುವು ದಾಖಲಿಸಿದೆ. ಈ ಮೂಲಕ ಐಪಿಎಲ್ 12ನೇ ಆವೃತ್ತಿಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದೆ.
ಇಂದು ಚೆನ್ನೈನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್ ಕೆ, ಧೋನಿಯ  ಸಮಯೋಚಿತ ಅರ್ಧಶತಕದ ನೆರವಿನಿಂದ ಐದು ವಿಕೆಟ್ ನಷ್ಟಕ್ಕೆ 175 ರನ್‌ಗಳ ಸವಾಲಿನ ಮೊತ್ತ ಪೇರಿಸಿತು.
ಗೆಲುವಿಗೆ 176 ರನ್ ಗಳ ಗುರಿ ಬೆನ್ನಟ್ಟಿದ ರಾಜಸ್ಥಾನ್, ಬೆನ್ ಸ್ಟೋಕ್ಸ್(46) ಏಕಾಂಗಿ ಹೋರಾಟದ ಹೊರತಾಗಿಯೂ ಎಂಟು ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿ ಸೋಲು ಒಪ್ಪಿಕೊಂಡಿತು. 
ಸವಾಲಿನ ಮೊತ್ತ ಬೆನ್ನಟ್ಟಿದ ರಾಜಸ್ಥಾನ್ ಆರಂಭ ಉತ್ತಮವಾಗಿರಲಿಲ್ಲ. ನಾಯಕ ಅಜಿಂಕ್ಯ ರಹಾನೆ ಖಾತೆ ತೆರೆಯುವ ಮುನ್ನವೇ ಪೆವಿಲಿಯನ್ ಸೇರಿಕೊಂಡರು. 
ಚೆನ್ನೈ ಪರ ದೀಪಕ್ ಚಹಾರ್, ಶಾರ್ದೂಕ್ ಥಾಕೂರ್, ಇಮ್ರಾನ್ ತಾಹಿತ್ ಹಾಗೂ ಡ್ವೇನ್ ಬ್ರಾವೋ ತಲಾ ಎರಡು ವಿಕೆಟ್ ಪಡೆದರು. ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಧೋನಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com