3ನೇ ಬಾರಿಗೆ ಐಸಿಸಿ ಚಾಂಪಿಯನ್‌ಶಿಪ್ ದಂಡ ಉಳಿಸಿಕೊಂಡ ಟೀಂ ಇಂಡಿಯಾ, ಬಹುಮಾನ ಎಷ್ಟು ಗೊತ್ತ?

ಆಸ್ಟ್ರೇಲಿಯಾ ನೆಲದಲ್ಲೇ ಆಸೀಸ್ ವಿರುದ್ಧ ಟೆಸ್ಟ್ ಸರಣಿ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದ ಟೀಂ ಇಂಡಿಯಾ 3ನೇ ಬಾರಿಗೆ ಐಸಿಸಿ ಚಾಂಪಿಯನ್‌ಶಿಪ್ ದಂಡವನ್ನು ತನ್ನ ಬಳಿಯಲ್ಲೇ ಉಳಿಸಿಕೊಂಡಿದೆ.
ಟೀಂ ಇಂಡಿಯಾ
ಟೀಂ ಇಂಡಿಯಾ
Updated on: 
ದುಬೈ: ಆಸ್ಟ್ರೇಲಿಯಾ ನೆಲದಲ್ಲೇ ಆಸೀಸ್ ವಿರುದ್ಧ ಟೆಸ್ಟ್ ಸರಣಿ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದ ಟೀಂ ಇಂಡಿಯಾ 3ನೇ ಬಾರಿಗೆ ಐಸಿಸಿ ಚಾಂಪಿಯನ್‌ಶಿಪ್ ದಂಡವನ್ನು ತನ್ನ ಬಳಿಯಲ್ಲೇ ಉಳಿಸಿಕೊಂಡಿದೆ. 
ಇದರ ಜೊತೆಗೆ ಬಹುಮಾನವಾಗಿ 1 ಮಿಲಿಯನ್ ಡಾಲರ್ ಅನ್ನು ಪಡೆದುಕೊಂಡಿದೆ. ಪ್ರತಿ ವರ್ಷ ಏಪ್ರಿಲ್ 1ರಂದು ಟೆಸ್ಟ್ ರ್ಯಾಂಕಿಂಗ್ ನಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ತಂಡಕ್ಕೆ ಐಸಿಸಿ ಚಾಂಪಿಯನ್ ಶಿಪ್ ದಂಡವನ್ನು ನೀಡಲಾಗುತ್ತದೆ.
ಟೀಂ ಇಂಡಿಯಾ ಸದ್ಯ 5,007 ಅಂಕಗಳನ್ನು ಪಡೆದು 116 ರೇಟಿಂಗ್ ಪಡೆದು ಮೊದಲ ಸ್ಥಾನದಲ್ಲಿದೆ. 3,570 ಅಂಕಗಳನ್ನು ಪಡೆದು 108 ರೇಟಿಂಗ್ ಪಡೆದಿರುವ ನ್ಯೂಜಿಲ್ಯಾಂಡ್ ತಂಡ ಎರಡನೇ ಸ್ಥಾನದಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com