ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ 40 ರನ್ ಗಳ ಭರ್ಜರಿ ಗೆಲುವು

ಐಪಿಎಲ್ 2019ನೇ ಸಾಲಿನ ಟಿ-20 ಕ್ರಿಕೆಟ್ ಚಾಂಪಿಯನ್ ಶಿಪ್ ನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟೆಲ್ಸ್ ವಿರುದ್ಧ 40 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.
ಮುಂಬೈ ಇಂಡಿಯನ್ಸ್
ಮುಂಬೈ ಇಂಡಿಯನ್ಸ್
Updated on: 
ನವದೆಹಲಿ: ಐಪಿಎಲ್ 2019ನೇ ಸಾಲಿನ ಟಿ-20 ಕ್ರಿಕೆಟ್ ಚಾಂಪಿಯನ್ ಶಿಪ್ ನಲ್ಲಿ  ಗುರುವಾರ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟೆಲ್ಸ್ ವಿರುದ್ಧ 40 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.
ಇದರೊಂದಿಗೆ ಆಡಿರುವ 9 ಪಂದ್ಯದಲ್ಲಿ ಆರನೇ ಗೆಲುವು ದಾಖಲಿಸಿರುವ ಮುಂಬೈ, ಡೆಲ್ಲಿಯನ್ನು ಹಿಂದಿಕ್ಕೆ ಎರಡನೇ ಸ್ಥಾನಕ್ಕೇರಿದೆ. ಡೆಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದೆ.
ಮುಂಬೈ ಇಂಡಿಯನ್ಸ್ ನೀಡಿದ ಗುರಿ ಬೆನ್ನತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್  ಆರಂಭಿಕ ಆಟಗಾರ ಪಿಪಿ ಶಾ 20, ಶಿಖರ್ ಧವನ್ 35, ಎಆರ್ ಪಟೇಲ್ 26,  ರನ್ ಗಳಿಸದದ್ದು ಹೊರತುಪಡಿಸಿದರೆ ಉಳಿದಂತೆ ಯಾವ ಆಟಗಾರರು ಎರಡಂಕಿ ದಾಟಲಿಲ್ಲ. ಇದರಿಂದಾಗಿ ನಿಗದಿತ ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 128 ರನ್ ಗಳಿಸಲಷ್ಟೇ ಶಕ್ತವಾಯಿತು.
ಇನ್ನೂ ಬೌಲಿಂಗ್ ವಿಭಾಗದಲ್ಲಿ ಮುಂಬೈ ಇಂಡಿಯನ್ಸ್ ಪರ ಆರ್ ಡಿ ಚಾಹರ್  ಪ್ರಮುಖ ವಿಕೆಟ್ ಕಬಳಿಸುವ ಮೂಲಕ ತಂಡ ಗೆಲುವು ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. 32 ರನ್ ಗಳಿಸಿದ ಹಾರ್ದಿಕ್ ಪಾಂಡ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಗೆ ಭಾಜನರಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com