ಸಂಗ್ರಹ ಚಿತ್ರ
ಕ್ರಿಕೆಟ್
ಕೋಟಿ, ಕೋಟಿ ಕಳೆದುಕೊಳ್ಳುವ ಭೀತಿ: ಚೆನ್ನೈನಿಂದ ಹೈದರಾಬಾದ್ ಗೆ ಐಪಿಎಲ್ ಫೈನಲ್ ಪಂದ್ಯ ಶಿಫ್ಟ್!
ಸ್ಥಳೀಯ ಮುನಿಸಿಪಲ್ ಕಾರ್ಪೋರೇಷ್ ನಿಂದ ಯೋಗ್ಯತಾ ಪ್ರಮಾಣ ಪತ್ರ ಪಡೆದಿಲ್ಲ. ಈ ಹಿನ್ನೆಲೆಯಲ್ಲಿ ಚೆಪಕ್ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಐಪಿಎಲ್ ಫೈನಲ್...
ನವದೆಹಲಿ: ಸ್ಥಳೀಯ ಮುನಿಸಿಪಲ್ ಕಾರ್ಪೋರೇಷ್ ನಿಂದ ಯೋಗ್ಯತಾ ಪ್ರಮಾಣ ಪತ್ರ ಪಡೆದಿಲ್ಲ. ಈ ಹಿನ್ನೆಲೆಯಲ್ಲಿ ಚೆಪಕ್ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಐಪಿಎಲ್ ಫೈನಲ್ ಪಂದ್ಯವನ್ನು ಹೈದರಾಬಾದ್ ಗೆ ಶಿಫ್ಟ್ ಮಾಡಲಾಗಿದೆ.
ಚೆಪಕ್ ಕ್ರೀಡಾಂಗಣದ ಮೂರು ಗ್ಯಾಲರಿಯಲ್ಲಿ ಸುಮಾರು 12 ಸಾವಿರ ಜನರ ಕುಳಿತುಕೊಳ್ಳಬಹುದು. ಇದರಿಂದಾಗಿ ಕೋಟಿ, ಕೋಟಿ ಹಣ ಕಳೆದುಕೊಳ್ಳುವ ಭೀತಿಯಲ್ಲಿ ಬಿಸಿಸಿಐ ಚೆನ್ನೈನಲ್ಲಿ ನಡೆಯಬೇಕಿದ್ದ ಐಪಿಎಲ್ ಫೈನಲ್ ಪಂದ್ಯವನ್ನು ಹೈದರಾಬಾದ್ ಗೆ ಶಿಫ್ಟ್ ಮಾಡಲಾಗಿದೆ.
ಮೇ 12ರಂದು ಫೈನಲ್ ಪಂದ್ಯ ಹೈದರಾಬಾದ್ ನಲ್ಲಿ ನಡೆಯಲಿದೆ. ಇನ್ನು ಮೊದಲ ಕ್ವಾಲಿಫೈಯರ್ ಪಂದ್ಯ ಚೆನ್ನೈನಲ್ಲಿ ಆಯೋಜಿಸಲಾಗಿದೆ. 2ನೇ ಕ್ವಾಲಿಫೈಯರ್ ಹಾಗೂ ಎಲಿಮಿನೇಟರ್ ಪಂದ್ಯ ವಿಶಾಖಪಟ್ಟಣಂನಲ್ಲಿ ನಡೆಯಲಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ