ಡಿವಿಲಿಯರ್ಸ್‌ರಿಂದ 'ಹ್ಯಾಟ್ರಿಕ್ ಸಿಕ್ಸ್', ಜೊತೆಗೆ ಸಿಡಿಲಬ್ಬರದ ಬ್ಯಾಟಿಂಗ್ ವಿಡಿಯೋ!

ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಎಬಿ ಡಿವಿಲಿಯರ್ಸ್ ಅಬ್ಬರದ ಬ್ಯಾಟಿಂಗ್ ಮಾಡಿದ್ದು ಹಲವು ಪಂದ್ಯಗಳ ಬಳಿಕ ತಮ್ಮ 360 ಡಿಗ್ರಿಯಲ್ಲಿ ಬ್ಯಾಟಿಂಗ್ ಮಾಡಿ ಅಭಿಮಾನಿಗಳನ್ನು ರಂಜಿಸಿದ್ದಾರೆ.
ಎಬಿ ಡಿವಿಲಿಯರ್ಸ್
ಎಬಿ ಡಿವಿಲಿಯರ್ಸ್
Updated on: 
ಬೆಂಗಳೂರು: ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಎಬಿ ಡಿವಿಲಿಯರ್ಸ್ ಅಬ್ಬರದ ಬ್ಯಾಟಿಂಗ್ ಮಾಡಿದ್ದು ಹಲವು ಪಂದ್ಯಗಳ ಬಳಿಕ ತಮ್ಮ 360 ಡಿಗ್ರಿಯಲ್ಲಿ ಬ್ಯಾಟಿಂಗ್ ಮಾಡಿ ಅಭಿಮಾನಿಗಳನ್ನು ರಂಜಿಸಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಎಬಿ ಡಿವಿಲಿಯರ್ಸ್ ಅಜೇಯ 82 ರನ್ ಪೇರಿಸಿದ್ದರು. ಎಬಿಡಿ 44 ಎಸೆತಗಳಲ್ಲಿ 7 ಸಿಕ್ಸರ್ ಮತ್ತು 3 ಬೌಂಡರಿ ಸೇರಿ 82 ರನ್ ಸಿಡಿಸಿದ್ದಾರೆ.
19ನೇ ಓವರ್ ಅನ್ನು ಬೌಲಿಂಗ್ ಮೊಹಮ್ಮದ್ ಶಮಿ ಅವರ 3,4,ಹಾಗೂ 5ನೇ ಎಸೆತದಲ್ಲಿ ಡಿವಿಲಿಯರ್ಸ್ ಸಿಕ್ಸರ್ ಸಿಡಿಸಿದರು. ಎಬಿಡಿ ಹ್ಯಾಟ್ರಿಕ್ ಸಿಕ್ಸ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ಅಬ್ಬರ ಬ್ಯಾಟಿಂಗ್ ಮಾಡಿದ್ದು 4 ವಿಕೆಟ್ ನಷ್ಟಕ್ಕೆ 202 ರನ್ ಬೃಹತ್ ಮೊತ್ತ ದಾಖಲಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com