ಐಸಿಸಿ ವಿಶ್ವಕಪ್ ಟೂರ್ನಿ ಅಂತ್ಯದೊಂದಿಗೆ ಹಾಲಿ ಕೋಚ್ ರವಿಶಾಸ್ತ್ರಿ ಅವರ ಒಪ್ಪಂದದ ಅವಧಿ ಕೂಡ ಮುಕ್ತಾಯವಾಗಿದ್ದು, ಈಗಾಗಲೇ ಬಿಸಿಸಿಐ ಕೋಚ್ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿದೆ. ಹಾಲಿ ಕೋಚ್ ರವಿಶಾಸ್ತ್ರಿ, ವಿರೇಂದ್ರ ಸೆಹ್ವಾಗ್, ಮಾಜಿ ಟೀಂ ಇಂಡಿಯಾ ಕೋಚ್ ಗ್ಯಾರಿ ಕರ್ಸ್ಟರ್ನ್, ಮಹೇಲಾ ಜಯವರ್ಧನೆ, ಟಾಮ್ ಮೂಡಿ ಸೇರಿದಂತೆ ಘಟಾನುಘಟಿ ಕ್ರಿಕೆಟಿಗರು ಕೋಚ್ ಹುದ್ದೆಯ ರೇಸ್ ನಲ್ಲಿದ್ದಾರೆ. ಇಂತಹ ಘಾಟಾನುಘಟಿ ಆಟಗಾರರ ನಡುವೆಯೂ ಟೀಂ ಇಂಡಿಯಾ ಪ್ರಧಾನ ಕೋಚ್ ಆಯ್ಕೆ ಕಷ್ಟವೇನಲ್ಲ ಎಂದು ಹೇಳುವ ಮೂಲಕ ಕ್ರಿಕೆಟ್ ಸಲಹಾ ಸಮಿತಿ ಅಧ್ಯಕ್ಷ ಕಪಿಲ್ ದೇವ್ ಅಚ್ಚರಿ ಮೂಡಿಸಿದ್ದಾರೆ.