ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ

ದಾಖಲೆಯ 43ನೇ ಶತಕದ ಜೊತೆಗೆ ವಿಶ್ವ ದಾಖಲೆ ಬರೆದ ರನ್ ಮೆಶಿನ್ ವಿರಾಟ್ ಕೊಹ್ಲಿ!

ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ದಾಖಲೆಯ 43ನೇ ಶತಕ ಸಿಡಿಸಿದ್ದು ಇದರ ಜೊತೆಗೆ ವಿಶ್ವ ದಾಖಲೆಯೊಂದನ್ನು ಬರೆದಿದ್ದಾರೆ.

ಜಮೈಕಾ: ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ದಾಖಲೆಯ 43ನೇ ಶತಕ ಸಿಡಿಸಿದ್ದು ಇದರ ಜೊತೆಗೆ ವಿಶ್ವ ದಾಖಲೆಯೊಂದನ್ನು ಬರೆದಿದ್ದಾರೆ. 

ವಿಂಡೀಸ್ ವಿರುದ್ಧ ವಿರಾಟ್ ಕೊಹ್ಲಿ 114 ರನ್ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಇದರ ಜೊತೆಗೆ ಒಂದು ದಶಕದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 20 ಸಾವಿರ ರನ್ ಹೊಡೆದ ವಿಶ್ವದ ಮೊದಲ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. 

ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಟಿಂಗ್ ಒಂದು ದಶಕದಲ್ಲಿ 18,962 ರನ್ ಬಾರಿಸಿ ಅಗ್ರಸ್ಥಾನದಲ್ಲಿದ್ದರು. ಇದೀಗ ವಿರಾಟ್ ಕೊಹ್ಲಿ ಒಟ್ಟಾರೆ 20 ಸಾವಿರ ರನ್ ಹೊಡೆದು ಅಗ್ರಪಂಥಿಯರಾಗಿದ್ದಾರೆ. 

ದಕ್ಷಿಣ ಆಫ್ರಿಕಾದ ಜಾಕ್ ಕಾಲಿನ್ 16,777 ರನ್ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ. ಮಹೇಲಾ ಜಯವರ್ಧನೆ(16,304 ರನ್), ಕುಮಾರ ಸಂಗಕ್ಕಾರ(15,999 ರನ್), ಸಚಿನ್ ತೆಂಡೂಲ್ಕರ್(15,962 ರನ್) ಸಿಡಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com