ಭಾರತದ ಸ್ಟಾರ್ ಕ್ರಿಕೆಟಿಗರನ್ನು ಕೊಲೆ ಮಾಡ್ತೀನಿ! ಬಿಸಿಸಿಐಗೆ ಇ-ಮೇಲ್, ಆತಂಕ ಸೃಷ್ಟಿ!

ಟೀಂ ಇಂಡಿಯಾ ಆಟಗಾರರನ್ನು ಕೊಲೆ ಮಾಡುವ ಬೆದರಿಕೆ ಹಾಕಿರುವ ಇ-ಮೇಲ್ ಒಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಗೆ ಬಂದಿದ್ದು ಕ್ರಿಕೆಟ್ ವಲಯದಲ್ಲಿ ಆಂತಕಕ್ಕೆ ಕಾರಣವಾಗಿದೆ.
ಟೀಂ ಇಂಡಿಯಾ
ಟೀಂ ಇಂಡಿಯಾ
Updated on

ಮುಂಬೈ: ಟೀಂ ಇಂಡಿಯಾ ಆಟಗಾರರನ್ನು ಕೊಲೆ ಮಾಡುವ ಬೆದರಿಕೆ ಹಾಕಿರುವ ಇ-ಮೇಲ್ ಒಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಗೆ ಬಂದಿದ್ದು ಕ್ರಿಕೆಟ್ ವಲಯದಲ್ಲಿ ಆಂತಕಕ್ಕೆ ಕಾರಣವಾಗಿದೆ.

ಆಗಸ್ಟ್ 16ರಂದು ಬಿಸಿಸಿಐಗೆ ಈ ಬೆದರಿಕೆ ಇ-ಮೇಲ್ ಬಂದಿತ್ತು. ಕೂಡಲೇ ಬಿಸಿಸಿಐ ಪೊಲೀಸರಿಗೆ ಈ ವಿಚಾರ ತಿಳಿಸಿತ್ತು. ಈ ಸಂಬಂಧ ತನಿಖೆ ನಡೆಸಿದ ಮಹಾರಾಷ್ಟ್ರ ಎಟಿಎಸ್ ಶಂಕಿತ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. 

ಎಟಿಎಸ್ ಅಧಿಕಾರಿಗಳು ಆರೋಪಿಯನ್ನು ಕೋರ್ಟ್ ಗೆ ಹಾಜರು ಪಡಿಸಿದ್ದು ಕೋರ್ಟ್ ಆಗಸ್ಟ್ 26ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. 

ಸದ್ಯ ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡದ ಮೇಲೆ ಉಗ್ರ ದಾಳಿ ನಡೆಯಬಹುದೆಂದು ಇತ್ತೀಚೆಗಷ್ಟೇ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಗೆ ಅನಾಮಧೇಯ ವ್ಯಕ್ತಿಯೋರ್ವ ಇ-ಮೇಲ್ ಕಳುಹಿಸಿದ್ದ. ಈ ಸಂಬಂಧ ಪಿಸಿಬಿ ಈ ವಿಚಾರವನ್ನು ತಕ್ಷಣವೇ ಐಸಿಸಿ ಮತ್ತು ಬಿಸಿಸಿಐಗೆ ರವಾನೆ ಮಾಡಿ, ತನಿಖೆ ನಡೆಸಿದ ಬಳಿಕ ಇದೊಂದು ಹುಸಿ ಮೇಲ್ ಎಂದು ಸ್ಪಷ್ಟಪಡಿಸಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com