ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ
ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ

ಮುಸುಕಿನ ಗುದ್ದಾಟವೋ ಏನೋ: ಕೊನೆಗೂ ರೋಹಿತ್ ಕೈಬಿಟ್ಟಿದ್ದರ ಬಗ್ಗೆ ಮೌನ ಮುರಿದ ಕೊಹ್ಲಿ!

ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ನಡುವಿನ ಮುಸುಕಿನ ಗುದ್ದಾಟದಿಂದಾಗಿ ವಿಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ರೋಹಿತ್ ರನ್ನು ಕೈಬಿಡಲಾಗಿದೆ ಎಂಬ ವದಂತಿಗಳು ಹಬ್ಬಿದ್ದವು. ಇದೀಗ ಕೊಹ್ಲಿ ಈ ವದಂತಿಗಳ ಕುರಿತು ಮೌನ ಮುರಿದಿದ್ದಾರೆ.

ನಾರ್ತ್ ಸೌಂಡ್: ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ನಡುವಿನ ಮುಸುಕಿನ ಗುದ್ದಾಟದಿಂದಾಗಿ ವಿಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ರೋಹಿತ್ ರನ್ನು ಕೈಬಿಡಲಾಗಿದೆ ಎಂಬ ವದಂತಿಗಳು ಹಬ್ಬಿದ್ದವು. ಇದೀಗ ಕೊಹ್ಲಿ ಈ ವದಂತಿಗಳ ಕುರಿತು ಮೌನ ಮುರಿದಿದ್ದಾರೆ.

ವಿಂಡೀಸ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ರೋಹಿತ್ ಬದಲಿಗೆ ಹನುಮ ವಿಹಾರಿಗೆ ಅವಕಾಶ ನೀಡಲಾಗಿತ್ತು. ಇದಕ್ಕೆ ವಿರಾಟ್ ಕೊಹ್ಲಿ ಹನುಮ ವಿಹಾರಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಸಾಮರ್ಥ್ಯವನ್ನು ಪರಿಗಣಿಸಿ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ ಎಂದು ವಿರಾಟ್ ಕೊಹ್ಲಿ ಸ್ಪಷ್ಟನೆ ನೀಡಿದ್ದಾರೆ.

ತಂಡವನ್ನು ಸಮತೋಲನ ಮಾಡುವ ಉದ್ದೇಶದಿಂದ ಹನುಮ ವಿಹಾರಿಗೆ ಅವಕಾಶ ನೀಡಲಾಯಿತು. ಒಂದು ವೇಳೆ ಅಗತ್ಯ ಬಿದ್ದರೆ ಅವರು  ಬೌಲರ್ ಗಳಿಗೆ ಬೆಂಬಲವಾಗಿ ನಿಲ್ಲಲಿದ್ದಾರೆ ಹೀಗಾಗಿ ಅವರಿಗೆ ಸ್ಥಾನ ನೀಡಲಾಯಿತು. ಇದನ್ನು ಜನರು ತಿಳಿದುಕೊಳ್ಳಬೇಕು ಎಂದು ಕೊಹ್ಲಿ ಹೇಳಿದ್ದಾರೆ. 

ಇನ್ನು ವಿಂಡೀಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 318 ರನ್ ಗಳ ಬೃಹತ್ ಗೆಲುವನ್ನು ದಾಖಲಿಸಿ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದಿಂದ ಮುಂದಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com