2020ರ ಐಪಿಎಲ್ ಹರಾಜು ಪಟ್ಟಿಯಲ್ಲಿ ಸ್ಟಾರ್ ವೇಗಿ ಮಿಚೆಲ್  ಸ್ಟಾರ್ಕ್ ಹೆಸರಿಲ್ಲ 

ಇದೇ 19 ರಂದು ಕೋಲ್ಕತಾದಲ್ಲಿ ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್ 2020ರ ಆವೃತ್ತಿಯ ಆಟಗಾರರ ಹರಾಜು ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಸ್ಟಾರ್ ವೇಗಿ ಮಿಚೆಲ್ ಸ್ಟಾರ್ಕ್  ಹೆಸರು ಇಲ್ಲ
ಮಿಚೆಲ್ ಸ್ಟಾರ್ಕ್
ಮಿಚೆಲ್ ಸ್ಟಾರ್ಕ್
Updated on: 

ನವ ದೆಹಲಿ: ಇದೇ 19 ರಂದು ಕೋಲ್ಕತಾದಲ್ಲಿ ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್ 2020ರ ಆವೃತ್ತಿಯ ಆಟಗಾರರ ಹರಾಜು ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಸ್ಟಾರ್ ವೇಗಿ ಮಿಚೆಲ್ ಸ್ಟಾರ್ಕ್  ಹೆಸರು ಇಲ್ಲ. ಆದರೆ, ಸಹ ಆಟಗಾರರಾದ ಗ್ಲೇನ್ ಮ್ಯಾಕ್ಸ್ ವೆಲ್ ಮತ್ತು ಕ್ರಿಸ್ ಲೀನ್ ಸೇರಿದಂತೆ ಏಳು ಆಸೀಸ್ ಆಟಗಾರರ ಹೆಸರು ಹರಾಜು ಪಟ್ಟಿಯಲ್ಲಿದೆ.

29ರ ಪ್ರಾಯದ ಮಿಚೆಲ್ ಸ್ಟಾರ್ಕ್  ಅವರು 2015ರ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಪರ ಐಪಿಎಲ್ ಗೆ ಪದಾರ್ಪಣೆ ಮಾಡಿದ್ದರು. 2018ರ ಆವೃತ್ತಿಯ ಹರಾಜಿನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕೆ 9.4 ಕೋಟಿ ರೂ.ಗೆ ಖರೀದಿಯಾಗಿದ್ದರು. ಆದರೆ, ಗಾಯದ ಸಮಸ್ಯೆಯಿಂದಾಗಿ ಕಳೆದ ಆವೃತ್ತಿಯಲ್ಲಿ ಒಂದೂ ಪಂದ್ಯವಾಡಿರಲಿಲ್ಲ 

ಪ್ರಸಕ್ತ ವರ್ಷದ ಆರಂಭದಲ್ಲಿ ಸ್ಟಾರ್ಕ್  ಗಾಯದಿಂದ ಸಂಪೂರ್ಣ ಚೇತರಿಸಿಕೊಂಡಿದ್ದರು. ಆದರೆ, ವಿಶ್ವಕಪ್ ಟೂರ್ನಿಯಿದ್ದ ಕಾರಣ ಅವರು 2019ರ ಹರಾಜಿಗೆ ಅಲಭ್ಯರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com