ಐಪಿಎಲ್ 2020: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಕನ್ನಡಿಗ ಕೆಎಲ್ ರಾಹುಲ್ ನಾಯಕ!

ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡದಂತೆ ಐಪಿಎಲ್ ಚಾಂಪಿಯನ್ ಆಗಲು ಜಾತಕಪಕ್ಷಿಯಂತೆ ಕಾಯುತ್ತಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಈ ಬಾರಿ ತಂಡದ ನಾಯಕತ್ವವನ್ನು ಕನ್ನಡಿಗ ಕೆಎಲ್ ರಾಹುಲ್ ಅವರಿಗೆ ನೀಡಿದೆ.
ಕೆಎಲ್ ರಾಹುಲ್
ಕೆಎಲ್ ರಾಹುಲ್
Updated on: 

ನವದೆಹಲಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡದಂತೆ ಐಪಿಎಲ್ ಚಾಂಪಿಯನ್ ಆಗಲು ಜಾತಕಪಕ್ಷಿಯಂತೆ ಕಾಯುತ್ತಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಈ ಬಾರಿ ತಂಡದ ನಾಯಕತ್ವವನ್ನು ಕನ್ನಡಿಗ ಕೆಎಲ್ ರಾಹುಲ್ ಅವರಿಗೆ ನೀಡಿದೆ. 

ಈ ಬಗ್ಗೆ ಪಂಜಾಬ್ ತಂಡದ ಸಹ ಮಾಲೀಕ ನೆಸ್ ವಾಡಿಯಾ ಅವರು ಸ್ಪಷ್ಟಪಡಿಸಿದ್ದಾರೆ. ಕೆಎಲ್ ರಾಹುಲ್ ಅವರನ್ನು ತಂಡದ ನಾಯಕನನ್ನಾಗಿ ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ. ಕಟು ವಿಮರ್ಶೆಗಳಿಗೆ ರಾಹುಲ್ ಮೌನವಹಿಸುತ್ತಾರೆ. ಬ್ಯಾಟ್ಸ್ ಮನ್ ಆಗಿ ಅಲ್ಲದೆ ನಾಯಕನಾಗಿಯೂ ಅವರ ಸಾಮರ್ಥ್ಯವನ್ನು ನೋಡುತ್ತೀರಿ. ಅವರು ನಮ್ಮ ಸರ್ವಾನುಮತದ ಆಯ್ಕೆಯಾಗಿದ್ದಾರೆ ಎಂದು ಹೇಳಿದರು. 

2018ರಲ್ಲಿ ಕೆಎಲ್ ರಾಹುಲ್ ಅವರನ್ನು ಪಂಜಾಬ್ ಫ್ರಾಂಚೈಸಿ 11 ಕೋಟಿ ರುಪಾಯಿ ನೀಡಿ ಖರೀದಿಸಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com