ರನ್ ಚೇಸಿಂಗ್ ನಲ್ಲೂ ಟೀಂ ಇಂಡಿಯಾ ವಿಶ್ವ ದಾಖಲೆ, ಇಷ್ಟಕ್ಕೂ ಆ ದಾಖಲೆ ಯಾವುದು?
ಕಟಕ್: ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭರ್ಜರಿ 4 ವಿಕೆಟ್ ಗಳ ಗೆಲುವು ಸಾಧಿಸಿ ಸರಣಿ ಕೈವಶ ಮಾಡಿಕೊಂಡ ಭಾರತ ತಂಡ ಈ ಗೆಲುವಿನ ಮೂಲಕ ಮತ್ತೊಂದು ವಿಶ್ವ ದಾಖಲೆ ನಿರ್ಮಾಣ ಮಾಡಿದೆ.
ನಿನ್ನೆ ಕಟಕ್ ನಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ನೀಡಿದ 315 ರನ್ ಗಳ ಗುರಿ ಬೆನ್ನು ಹತ್ತಿದ ಭಾರತ ತಂಡ 48.4 ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 316 ರನ್ ಗಳಿಸಿ ಜಯಭೇರಿ ಭಾರಿಸಿತು. ಆ ಮೂಲಕ ಅತೀ ಹೆಚ್ಚು ಬಾರಿ 300ಕ್ಕೂ ಅಧಿಕ ರನ್ ಚೇಸಿಂಗ್ ನಲ್ಲಿ ಅತೀ ಹೆಚ್ಚು ಪಂದ್ಯಗಳನ್ನು ಗೆದ್ದ ತಂಡ ಎಂಬ ದಾಖಲೆಯನ್ನು ತನ್ನದಾಗಿಸಿಕೊಂಡಿತು.
ಭಾರತ ತಂಡ 300ಕ್ಕೂ ಅಧಿಕ ರನ್ ಚೇಸಿಂಗ್ ನಲ್ಲಿ ಒಟ್ಟು 17 ಪಂದ್ಯಗಳನ್ನು ಗೆದ್ದಿದ್ದು, 11 ಪಂದ್ಯಗಳನ್ನು ಗೆದ್ದಿರುವ ಇಂಗ್ಲೆಂಡ್ ತಂಡ 2ನೇ ಸ್ಥಾನದಲ್ಲಿದೆ. ಇನ್ನು ತಲಾ 10 ಪಂದ್ಯಗಳನ್ನು ಗೆದ್ದಿರುವ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ತಂಡಗಳು ಜಂಟಿ ಮೂರನೇ ಸ್ಥಾನದಲ್ಲಿದ್ದು, ತಲಾ 6 ಪಂದ್ಯಗಳನ್ನು ಗೆದ್ದಿರುವ ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ತಂಡಗಳು ಜಂಟಿ 6ನೇ ಸ್ಥಾನದಲ್ಲಿವೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ