ಕಟಕ್ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್: ಐಸಿಸಿ ರ್ಯಾಂಕಿಂಗ್ ಅಗ್ರಸ್ಥಾನದಲ್ಲಿ ಕೊಹ್ಲಿ!

ವಿಂಡೀಸ್ ವಿರುದ್ಧದ ಸರಣಿ ನಿರ್ಣಾಯಕ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿ ಪಂದ್ಯದ ಗೆಲುವಿನಲ್ಲಿ ನಿರ್ಣಾಯಕ ಪಾತ್ರವಹಿಸಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇದೀಗ ಐಸಿಸಿ ಏಕದಿನ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
Updated on

ನವದೆಹಲಿ: ವಿಂಡೀಸ್ ವಿರುದ್ಧದ ಸರಣಿ ನಿರ್ಣಾಯಕ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿ ಪಂದ್ಯದ ಗೆಲುವಿನಲ್ಲಿ ನಿರ್ಣಾಯಕ ಪಾತ್ರವಹಿಸಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇದೀಗ ಐಸಿಸಿ ಏಕದಿನ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. 

ವಿರಾಟ್ ಕೊಹ್ಲಿ ಏಕದಿನ ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ 887 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ ಟೀಂ ಇಂಡಿಯಾದ ಮತ್ತೊಬ್ಬ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ 873 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಇನ್ನು ಕೊಹ್ಲಿ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್ ನಲ್ಲಿ ಅಗ್ರಸ್ಥಾನದಲ್ಲಿದ್ದರೆ, ಟಿ20 ಕ್ರಿಕೆಟ್ ನಲ್ಲಿ 10ನೇ ಸ್ಥಾನದಲ್ಲಿದ್ದಾರೆ.

ಇದೇ ವೇಳೆ ಏಕದಿನ ಕ್ರಿಕೆಟ್ ನಲ್ಲಿ ಕೊಹ್ಲಿ(11,125), ಅತೀ ಹೆಚ್ಚು ಶತಕ(42), 35 ಬಾರಿ ಪಂದ್ಯ ಶ್ರೇಷ್ಠ ಹಾಗೂ 7 ಬಾರಿ ಸರಣಿ ಶ್ರೇಷ್ಠ ಜೊತೆಗೆ ಅತೀ ಹೆಚ್ಚು ಕ್ಯಾಚ್ 117 ಹಿಡಿದ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com