5ನೇ ಪಂದ್ಯ: ನ್ಯೂಜಿಲ್ಯಾಂಡ್ ವಿರುದ್ಧ ಟೀಂ ಇಂಡಿಯಾಗೆ ರೋಚಕ ಗೆಲುವು!

ನ್ಯೂಜಿಲ್ಯಾಂಡ್ ವಿರುದ್ಧದ 4ನೇ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದ್ದ ಟೀಂ ಇಂಡಿಯಾ 5ನೇ ಏಕದಿನ ಪಂದ್ಯದಲ್ಲಿ 35 ರನ್ ಗಳಿಂದ ರೋಚಕ ಗೆಲುವು ಸಾಧಿಸಿದ್ದು 4-1 ಅಂತರದಿಂದ...
ಟೀಂ ಇಂಡಿಯಾ
ಟೀಂ ಇಂಡಿಯಾ
Updated on: 
ನ್ಯೂಜಿಲ್ಯಾಂಡ್ ವಿರುದ್ಧದ 4ನೇ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದ್ದ ಟೀಂ ಇಂಡಿಯಾ 5ನೇ ಏಕದಿನ ಪಂದ್ಯದಲ್ಲಿ 35 ರನ್ ಗಳಿಂದ ರೋಚಕ ಗೆಲುವು ಸಾಧಿಸಿದ್ದು 4-1 ಅಂತರದಿಂದ ಸರಣಿ ಕೈವಶ ಮಾಡಿಕೊಂಡಿದೆ. 
ವೆಲ್ಲಿಂಗ್ಟನ್ ನಲ್ಲಿ ನಡೆದ 5ನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ 252 ರನ್ ಗಳಿಗೆ ಸರ್ವಪತನ ಕಂಡಿತು. 253 ರನ್ ಗಳ ಗುರಿ ಬೆನ್ನಟ್ಟಿದ್ದ ನ್ಯೂಜಿಲ್ಯಾಂಡ್ ಆಟಗಾರರು ಚಹಾಲ್ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ್ದು 217 ರನ್ ಗಳಿಗೆ ಆಲೌಟ್ ಆಗಿದ್ದು 35 ರನ್ ಗಳಿಗೆ ತಂಡ ಸೋಲು ಕಂಡಿದೆ. 
ಟೀಂ ಇಂಡಿಯಾ ಪರ ಅಂಬಟ್ಟಿ ರಾಯುಡು 90, ವಿಜಯ್ ಶಂಕರ್ 45, ಕೇದಾರ್ ಜಾದವ್ 34, ಹಾರ್ದಿಕ್ ಪಾಂಡ್ಯ 45 ರನ್ ಪೇರಿಸಿದ್ದಾರೆ. 
ನ್ಯೂಜಿಲ್ಯಾಂಡ್ ಪರ ಬೌಲಿಂಗ್ ನಲ್ಲಿ ಹೆನ್ರಿ 4, ಬೋಲ್ಟ್ 3 ಹಾಗೂ ನಿಶಾಮ್ 1 ವಿಕೆಟ್ ಪಡೆದಿದ್ದಾರೆ. 
ನ್ಯೂಜಿಲ್ಯಾಂಡ್ ಪರ ಬ್ಯಾಟಿಂಗ್ ನಲ್ಲಿ ಮನ್ರೋ 24, ಮಿಲಿಯಮ್ ಸನ್ 39, ಲಾಥಮ್ 37, ನಿಶಾಮ್ 44 ರನ್ ಪೇರಿಸಿದ್ದಾರೆ. 
ಟೀಂ ಇಂಡಿಯಾ ಬೌಲಿಂಗ್ ನಲ್ಲಿ ಚಹಾಲ್ 3, ಮೊಹಮ್ಮದ್ ಶಮಿ, ಹಾರ್ದಿಕ್ ಪಾಂಡ್ಯ ತಲಾ 2, ಭುವನೇಶ್ವರ್ ಕುಮಾರ್ ಹಾಗೂ ಕೇದಾರ್ ಜಾದವ್ ತಲಾ 1 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com