ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ

ಆಸೀಸ್ ಸರಣಿಗೆ ಭಾರತ ತಂಡ ಪ್ರಕಟ, ರಾಹುಲ್ ಇನ್, ಕಾರ್ತಿಕ್ ಔಟ್

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಹಾಗೂ ಟಿ-20 ಸರಣಿಗೆ ಶುಕ್ರವಾರ ಭಾರತ ತಂಡವನ್ನು ಪ್ರಕಟಿಸಲಾಗಿದ್ದು...
ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಹಾಗೂ ಟಿ-20 ಸರಣಿಗೆ ಶುಕ್ರವಾರ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಅಮಾನತುಗೊಂಡಿದ್ದ ಕೆಎಲ್ ರಾಹುಲ್ ಮತ್ತೆ ಕಮ್ ಬ್ಯಾಕ್ ಮಾಡಿದ್ದಾರೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಆಯ್ಕೆ ಸಮಿತಿ ಇಂದು ಆಸೀಸ್ ವಿರುದ್ಧ ತವರಿನಲ್ಲಿ ನಡೆಯುವ ಐದು ಏಕದಿನ ಹಾಗೂ ಎರಡು ಟಿ-20 ಪಂದ್ಯಗಳಿಗೆ ಭಾರತ ತಂಡವನ್ನು ಪ್ರಕಟಿಸಿದೆ.
ನ್ಯೂಜಿಲೆಂಡ್ ವಿರುದ್ಧದ ಸರಣಿಯ ವೇಳೆ ವಿಶ್ರಾಂತಿಯಲ್ಲಿದ್ದ ನಾಯಕ ವಿರಾಟ್ ಕೊಹ್ಲಿ ಅವರು ಮತ್ತೆ ಆಸೀಸ್ ವಿರುದ್ಧದ ಟಿ-20 ಹಾಗೂ ಏಕದಿನ ಸರಣಿಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಅಲ್ಲದೆ ಬಲಗೈ ವೇಗಿ ಜಸ್ಪ್ರೀತ್ ಬುಮ್ರಾ ತಂಡವನ್ನು ಸೇರಿಕೊಂಡಿದ್ದಾರೆ. 
ತಾತ್ಕಾಲಿಕವಾಗಿ ಅಮಾನತು ತೆರವುಗೊಂಡ ಹಿನ್ನಲೆಯಲ್ಲಿ ಕರ್ನಾಟಕದ ಕೆಎಲ್ ರಾಹುಲ್ ಅವರಿಗೆ ಮತ್ತೆ ಅವಕಾಶ ನೀಡಲಾಗಿದೆ. ಜೊತೆಗೆ ಮಯಾಂಕ್ ಮಾರ್ಕಂಡೆ ಅವರಿಗೆ ಟಿ-20 ಸರಣಿಯಲ್ಲಿ ಮೊದಲ ಬಾರಿಗೆ ಅವಕಾಶ ಕಲ್ಪಿಸಲಾಗಿದೆ.
ಅಚ್ಚರಿಯೆಂಬಂತೆ ದಿನೇಕ್ ಕಾರ್ತಿಕ್‌ ಅವರನ್ನು ಏಕದಿನ ತಂಡದಿಂದ ಕೈಬಿಡಲಾಗಿದೆ. ಇವರ ಬದಲು ರಿಷಬ್ ಪಂತ್‌ಗೆ ಅವಕಾಶ ನೀಡಲಾಗಿದೆ. 
ಟಿ-20 ತಂಡ
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಕೆಎಲ್ ರಾಹುಲ್, ಶಿಖರ್ ಧವನ್, ರಿಷಬ್ ಪಂತ್, ದಿನೇಶ್ ಕಾರ್ತಿಕ್, ಮಹೇಂದ್ರ ಸಿಂಗ್ ಧೋನಿ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಕೃುಣಾಲ್ ಪಾಂಡ್ಯ, ವಿಜಯ್ ಶಂಕರ್, ಯುಜ್ವೇಂದ್ರ ಚಹಲ್, ಜಸ್ಪ್ರೀತ್ ಬುಮ್ರಾ, ಉಮೇಶ್ ಯಾದವ್, ಸಿದ್ದಾರ್ಥ್ ಕೌಲ್, ಮಯಾಂಕ್ ಮಾರ್ಕಂಡೆ. 
ಮೊದಲ ಎರಡು ಏಕದಿನ ಪಂದ್ಯ
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಶಿಖರ್ ಧವನ್, ಅಂಬಟಿ ರಾಯುಡು, ಕೇದರ್ ಜಾಧವ್, ಮಹೇಂದ್ರ ಸಿಂಗ್ ಧೋನಿ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಯುಜ್ವೇಂದ್ರ ಚಹಲ್, ಕುಲ್‌ದೀಪ್ ಯಾದವ್, ವಿಜಯ್ ಶಂಕರ್, ರಿಷಬ್ ಪಂತ್, ಸಿದ್ಧಾರ್ಥ್ ಕೌಲ್ ಮತ್ತು ಕೆಎಲ್ ರಾಹುಲ್. 
ಅಂತಿಮ ಮೂರು ಏಕದಿನ ಪಂದ್ಯಗಳಿಗೆ
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪಯನಾಯಕ), ಶಿಖರ್ ಧವನ್, ಅಂಬಟಿ ರಾಯುಡು, ಕೇದರ್ ಜಾಧವ್, ಮಹೇಂದ್ರ ಸಿಂಗ ಧೋನಿ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಹಲ್, ಕುಲ್‌ದೀಪ್ ಯಾದವ್, ಮೊಹಮ್ಮದ್ ಶಮಿ, ವಿಜಯ್ ಶಂಕರ್, ಕೆಎಲ್ ರಾಹುಲ್ ಮತ್ತು ರಿಷಬ್ ಪಂತ್. 

Related Stories

No stories found.

Advertisement

X
Kannada Prabha
www.kannadaprabha.com