ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ರೋಚಕ ಪಂದ್ಯ; ಆಫ್ರಿಕಾ ವಿರುದ್ಧ ಲಂಕಾಗೆ ಐತಿಹಾಸಿಕ ಗೆಲುವು!

ಶ್ರೀಲಂಕಾ ತಂಡದವೂ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ 1 ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿದ್ದು ಇದು 142 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಇದೊಂದು ಅಪರೂಪದ ಗೆಲುವಾಗಿದೆ.
ಲಂಕಾ ಆಟಗಾರರು
ಲಂಕಾ ಆಟಗಾರರು
Updated on
ಡರ್ಬನ್: ಶ್ರೀಲಂಕಾ ತಂಡದವೂ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ 1 ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿದ್ದು ಇದು 142 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಇದೊಂದು ಐತಿಹಾಸಿಕ ಗೆಲುವಾಗಿದೆ. 
ದಕ್ಷಿಣ ಆಫ್ರಿಕಾ ನೀಡಿದ 304 ರನ್ ಗಳ ಗುರಿ ಬೆನ್ನಟ್ಟಿದ ಶ್ರೀಲಂಕಾಗೆ ಆರಂಭಿಕ ಆಘಾತ ಎದುರಾಗಿತ್ತು. 52 ರನ್ ಗಳಿಗೆ ಪ್ರಮುಖ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ನಂತರ 226 ರನ್ ಗಳಿಸುವಷ್ಟರಲ್ಲಿ 9 ವಿಕೆಟ್ ಕಳೆದುಕೊಂಡು ಸೋಲಿನ ಸುಳಿಗೆ ಸಿಲುಕಿತ್ತು.
ಈ ವೇಳೆ ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದ್ದ ಕೌಸಲ್ ಪೆರೇರಾ ಕೊನೆಯ ವಿಕೆಟ್ ವಿಶ್ವ ಫರ್ನಾಂಡೋ ಜತೆ ಸೇರಿ 78 ರನ್ ಪೇರಿಸುವ ಮೂಲಕ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದಾರೆ. ಪೆರೇರಾ ಅಜೇಯ 153 ರನ್ ಬಾರಿಸಿದ್ದಾರೆ. 
142 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಂತಹ ಅಪರೂಪದ ದಾಖಲೆ ಮೂಡಿಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com