ಆಸೀಸ್ ವಿರುದ್ಧ ಸೋಲು, 'ಧೋನಿ ಕಥೆ ಮುಗಿಯಿತು'; ನಿಧಾನಗತಿಯ ಬ್ಯಾಟಿಂಗ್‌ಗೆ ಟ್ವೀಟರಿಗರು ಆಕ್ರೋಶ!

Published On :
ಹೈದರಾಬಾದ್: ವಿಶ್ವಕಪ್ ಟೂರ್ನಿಗೆ ದಿನಗಣನೆ ಶುರುವಾಗಿದೆ. ಆ ಮಧ್ಯೆ ಆಸ್ಟ್ರೇಲಿಯಾ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಕಂಡಿದ್ದು ನಿಧಾನಗತಿಯ ಬ್ಯಾಟಿಂಗ್ ಮಾಡಿದ್ದ ಎಂಎಸ್ ಧೋನಿ ವಿರುದ್ಧ ನೆಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಶಾಖಪಟ್ಟಣನ ಡಾ. ವೈಎಸ್ ರಾಜಶೇಕರ್ ರೆಡ್ಡಿ ಕ್ರಿಕೆಟ್ ಮೈದಾನದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ 3 ವಿಕೆಟ್ ಗಳಿಂದ ಸೋಲು ಕಂಡಿತ್ತು. ಈ ಪಂದ್ಯದಲ್ಲಿ ಎಂಎಸ್ ಧೋನಿ 37 ಎಸೆತಗಳಲ್ಲಿ ಅಜೇಯ 29 ರನ್ ಬಾರಿಸಿದ್ದರು. ಇದು ಟ್ವೀಟರಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಪಂದ್ಯವೊಂದರಲ್ಲಿ ಧೋನಿ ಉತ್ತಮವಾಗಿ ಆಡಿದರೆ ಅವರು ವಿಶ್ವಕಪ್ ಗೆ ಸಮರ್ಥ ಆಟಗಾರ ಎಂಬ ಮಾತುಗಳು ಕೇಳಿಬರುತ್ತಿದ್ದವು. ಇದೀಗ ಅವರ ನಿಧಾನಗತಿಯ ಬ್ಯಾಟಿಂಗ್ ನಿಂದಾಗಿ ವಿಶ್ವಕಪ್ ಗೆ ಧೋನಿ ಬೇಡ ಎಂಬ ಮಾತುಗಳು ತೀವ್ರವಾಗುತ್ತಿದೆ.
ಟಿ20 ಪಂದ್ಯದಲ್ಲಿ ಮೊದಲ ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 126 ರನ್ ಗಳಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Twitterಆಸ್ಟ್ರೇಲಿಯಾಟೀಂ ಇಂಡಿಯಾAustraliaTeam Indiaಟ್ವೀಟರ್MS Dhoniಎಂಎಸ್ ಧೋನಿCricket Offbeatಕ್ರಿಕೆಟ್ ಸ್ವಾರಸ್ಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


