ಬೆಂಗಳೂರು: ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂದು ನಡೆದ 2ನೇ ಟಿ20 ಪಂದ್ಯದಲ್ಲಿ ಭಾರತ 7 ವಿಕೆಟ್ ಗಳ ಸೋಲುಕಂಡಿದೆ.
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ 2ನೇ ಟಿ20 ಪಂದ್ಯದಲ್ಲಿ ಭಾರತ ನೀಡಿದ 191 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಆಸ್ಚ್ರೇಲಿಯಾ ತಂಡ ಗ್ಲೇನ್ ಮ್ಯಾಕ್ಸ್ ವೆಲ್ ಅವರ ಭರ್ಜರಿ ಶತಕದ ನೆರವಿನಿಂದ 19.4 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 194 ರನ್ ಗಳಿಸಿ ಗೆಲುವಿನ ಗುರಿ ಮುಟ್ಟಿತು.
ಅಂತೆಯೇ ಟಿ20 ಸರಣಿಯನ್ನು 2-0 ಅಂತರದಲ್ಲಿ ತನ್ನ ಕೈವಶ ಮಾಡಿಕೊಂಡಿತು.
ಇನ್ನು ಭಾರತದ ಪರ ವಿಜಯ್ ಶಂಕರ್ 2 ವಿಕೆಟ್ ಮತ್ತು ಕೌಲ್ 1 ವಿಕೆಟ್ ಪಡೆದರು. ಇನ್ನು ಇದೇ ಆಸ್ಚ್ರೇಲಿಯಾ ವಿರುದ್ಧದ ಏಕದಿನ ಸರಣಿ ಇದೇ ಮಾರ್ಚ್ 2ರಿಂದ ಆರಂಭವಾಗಲಿದ್ದು, ಹೈದರಾಬಾದ್ ನಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದೆ.