4ನೇ ಟೆಸ್ಟ್: ಪೂಜಾರ, ಪಂತ್ ಶತಕ, ಟೀಂ ಇಂಡಿಯಾ 622 ರನ್‌ಗೆ ಇನ್ನಿಂಗ್ಸ್ ಡಿಕ್ಲೇರ್!

ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 7 ವಿಕೆಟ್ ನಷ್ಟಕ್ಕೆ 622 ರನ್ ಪೇರಿಸಿದ್ದು ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 7 ವಿಕೆಟ್ ನಷ್ಟಕ್ಕೆ 622 ರನ್ ಪೇರಿಸಿದ್ದು ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದೆ. 
ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ್ದು ಟೀಂ ಇಂಡಿಯಾ 7 ವಿಕೆಟ್ ನಷ್ಟಕ್ಕೆ 622 ರನ್ ಪೇರಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದೆ. 
ಟೀಂ ಇಂಡಿಯಾ ಪರ ಚೇತೇಶ್ವರ ಪೂಜಾರ 193 ರನ್ ಹಾಗೂ ರಿಷಬ್ ಪಂತ್ ಅಜೇಯ 159 ರನ್ ಪೇರಿಸಿದ್ದು ಟೀಂ ಇಂಡಿಯಾ ಅಧಿಕ ಮೊತ್ತ ಪೇರಿಸಲು ಸಾಧ್ಯವಾಯಿತು. ಟೀಂ ಇಂಡಿಯಾ ಪರ ಮಾಯಾಂಕ್ ಅಗರವಾಲ್ 77, ವಿರಾಟ್ ಕೊಹ್ಲಿ 23, ಅಜಿಂಕ್ಯ ರಹಾನೆ 18, ಹನುಮ ವಿಹಾರಿ 42 ಹಾಗೂ ರವೀಂದ್ರ ಜಡೇಜಾ 81 ರನ್ ಗಳಿಸಿದ್ದಾರೆ. 
ಆಸ್ಟ್ರೇಲಿಯಾ ಪರ ಬೌಲಿಂಗ್ ನಲ್ಲಿ ನಾಥನ್ ಲಿಯಾನ್ 4 ಮತ್ತು ಹೆಜಲ್ವುಡ್ 2 ವಿಕೆಟ್ ಪಡೆದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com