ದುಬೈನಲ್ಲಿ ಅಲ್ಲ, ಮಾರ್ಚ್ 23ರಿಂದ ಭಾರತದಲ್ಲೇ ಐಪಿಎಲ್ ಪಂದ್ಯಾವಳಿ!
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ 2019ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಪಂದ್ಯಾವಳಿ ದುಬೈನಲ್ಲಿ ನಡೆಯಲಿದೆ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ ಈ ವಿಚಾರಕ್ಕೆ ಸ್ಪಷ್ಟನೆ ಸಿಕ್ಕಿದ್ದು...
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ 2019ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಪಂದ್ಯಾವಳಿ ದುಬೈನಲ್ಲಿ ನಡೆಯಲಿದೆ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ ಈ ವಿಚಾರಕ್ಕೆ ಸ್ಪಷ್ಟನೆ ಸಿಕ್ಕಿದ್ದು ಈ ಬಾರಿಯ ಐಪಿಎಲ್ ಭಾರತದಲ್ಲೇ ನಡೆಯಲಿದೆ.
ಹೌದು, ಇಂದು ನಡೆದ ಸುಪ್ರೀಂ ಕೋರ್ಟ್ ನೇಮಿಸಿರುವ ಬಿಸಿಸಿಐ ನಿರ್ವಾಹಕ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು ಮಾರ್ಚ್ 23ರಿಂದ ಭಾರತದಲ್ಲೇ ಪಂದ್ಯಾವಳಿ ನಡೆಯಲಿದೆ.
ಸದ್ಯ 2019ರ ಐಪಿಎಲ್ ಸ್ವದೇಶದಲ್ಲೇ ನಡೆಯಲಿದ್ದು ವೇಳಾಪಟ್ಟಿ ಕುರಿತಂತೆ ಮುಂದಿನ ದಿನಗಳಲ್ಲಿ ಬಿಸಿಸಿಐ ಬಿಡುಗಡೆ ಮಾಡಲಿದೆ. ಈ ಹಿಂದೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ 2009(ದಕ್ಷಿಣ ಆಫ್ರಿಕಾ) ಮತ್ತು 2014(ಯುಎಇ)ರಲ್ಲಿ ನಡೆಸಲಾಗಿತ್ತು.
ಇದೀಗ ಅಂತಹದ್ದೆ ಪರಿಸ್ಥಿತಿ ನಿರ್ಮಾಣವಾಗಿದ್ದು 2019ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿಯೂ ದುಬೈನಲ್ಲಿ ಪಂದ್ಯಾವಳಿ ನಡೆಯಲಿದೆ ಎಂಬ ಊಹಾಪೋಹಗಳು ಹರಿದಾಡಿತ್ತು. ಆದರೆ ಇದೀಗ ಈ ಎಲ್ಲಾ ಊಹಾಪೋಹಗಳಿಗೆ ತೆರೆ ಬಿದ್ದಿದೆ.