ದುಬೈ: ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಗೆಲ್ಲುವ ಮೂಲಕ ಟೀಂ ಇಂಡಿಯಾ ಐತಿಹಾಸಿಕ ಸಾಧನೆ ಮಾಡಿದ್ದು ಇನ್ನು ಸರಣಿಯಲ್ಲಿ ಮೂರು ಶತಕ ಸೇರಿದಂತೆ 521 ರನ್ ಬಾರಿಸಿದ್ದ ಕ್ಲಾಸಿಕ್ ಬ್ಯಾಟ್ಸ್ ಮನ್ ಚೇತೇಶ್ವರ ಪೂಜಾರ ಐಸಿಸಿ ರ‍್ಯಾಂಕಿಂಗ್‌ನಲ್ಲಿ 3ನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ.
ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ 159 ರನ್ ಭರ್ಜರಿ ಶತಕ ಸಿಡಿಸಿದ್ದ ಯುವ ಕ್ರಿಕೆಟಿಗ ರಿಷಬ್ ಪಂತ್ 21 ಸ್ಥಾನಗಳ ಏರಿಕೆ ಕಾಣುವ ಮೂಲಕ 17ನೇ ಸ್ಥಾನಕ್ಕೇರಿದ್ದಾರೆ. ಇನ್ನು ಈ ಹಿಂದೆ ಫರೂಖ್ ಇಂಜಿನಿಯರ್ ಇಂತಹ ಸಾಧನೆ ಮಾಡಿದ್ದರು.
ರಿಷಬ್ ಪಂತ್ ಕೇವಲ 9 ಟೆಸ್ಟ್ ಪಂದ್ಯಗಳಲ್ಲೇ ಟಾಪ್ 20 ರ‍್ಯಾಂಕಿಂಗ್‌ನಲ್ಲಿ ಸ್ಥಾನ ಪಡೆದು ಕಮಾಲ್ ಮಾಡಿದ್ದಾರೆ. ರಿಷಬ್ 7 ಇನ್ನಿಂಗ್ಸ್ ಲ್ಲಿ 350 ರನ್ ಸಿಡಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ. ಇನ್ನು 2016ರಲ್ಲಿ ನಡೆದ ಐಸಿಸಿ ಅಂಡರ್ 19 ವಿಶ್ವಕಪ್ ನಲ್ಲಿ ಪಂತ್ 18 ಎಸತೆಗಳಲ್ಲಿ ಅರ್ಧ ಶತಕ ಸಿಡಿಸಿದ್ದರು.
ಇನ್ನು 922 ಅಂಕಗಳೊಂದಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲೇ ಭದ್ರವಾಗಿ ಉಳಿದಿದ್ದಾರೆ.