ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾದ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ 34 ರನ್ ಗಳಿಂದ ಜಯ ಗಳಿಸಿತ್ತು. ಈ ಪಂದ್ಯದಲ್ಲಿ ಎಂಎಸ್ ಧೋನಿ ನಿಧಾನಗತಿಯ ಬ್ಯಾಟಿಂಗ್ ಮಾಡಿ ಅರ್ಧ ಶತಕ ಪೂರೈಸಿದ್ದರು. ಧೋನಿ 51 ರನ್ ಬಾರಿಸಲು ಬರೋಬ್ಬರಿ 96 ಎಸೆತಗಳನ್ನು ತೆಗೆದುಕೊಂಡಿದ್ದರು. ಇದು ಟ್ವೀಟರಿಗರ ಆಕ್ರೋಶಕ್ಕೆ ಕಾರಣವಾಗಿದೆ.