ಶಂಕಾಸ್ಪದ ಬೌಲಿಂಗ್ ವಿವಾದದ ಸುಳಿಗೆ ಸಿಲುಕಿದ ಅಂಬಟಿ ರಾಯುಡು!

ಅಸಭ್ಯ ಹೇಳಿಕೆ ನೀಡಿ ನಿಷೇಧದ ಭೀತಿ ಎದುರಿಸುತ್ತಿರುವ ಹಾರ್ದಿಕ್ ಪಾಂಡ್ಯಾ ಮತ್ತು ಕೆಎಲ್ ರಾಹುಲ್ ಪ್ರಕರಣ ಹಸಿರಾಗಿರುವಂತೆಯೇ ಇದೀಗ ಮತ್ತೋರ್ವ ಟೀಂ ಇಂಡಿಯಾ ಆಟಗಾರ ವಿವಾದದ ಸುಳಿಗೆ ಸಿಲುಕಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಸಿಡ್ನಿ: ಅಸಭ್ಯ ಹೇಳಿಕೆ ನೀಡಿ ನಿಷೇಧದ ಭೀತಿ ಎದುರಿಸುತ್ತಿರುವ ಹಾರ್ದಿಕ್ ಪಾಂಡ್ಯಾ ಮತ್ತು ಕೆಎಲ್ ರಾಹುಲ್ ಪ್ರಕರಣ ಹಸಿರಾಗಿರುವಂತೆಯೇ ಇದೀಗ ಮತ್ತೋರ್ವ ಟೀಂ ಇಂಡಿಯಾ ಆಟಗಾರ ವಿವಾದದ ಸುಳಿಗೆ ಸಿಲುಕಿದ್ದಾರೆ.
ಟೀಂ ಇಂಡಿಯಾ ಆಟಗಾರ ಅಂಬಟಿ ರಾಯುಡು ವಿರುದ್ಧ ಇದೀಗ ಶಂಕಾಸ್ಪದ ಬೌಲಿಂಗ್ ಶೈಲಿಯಂತಹ ಗಂಭೀರ ಆರೋಪ ಕೇಳಿಬಂದಿದ್ದು, ಆಸ್ಟ್ರೇಲಿಯಾ ವಿರುದ್ದ ಸಿಡ್ನಿಯಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಆಸಿಸ್ ಬ್ಯಾಟಿಂಗ್ ವೇಳೆ ಎರಡು ಓವರ್ ಗಳನ್ನು ಎಸೆದಿದ್ದರು. ಇದೀಗ ರಾಯುಡು ಬೌಲಿಂಗ್ ಶೈಲಿಯ ಬಗ್ಗೆ ಐಸಿಸಿ ಮ್ಯಾಚ್ ರೆಫರಿ ಮತ್ತು ಇತರೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. 
ಹೀಗಾಗಿ 33ರ ಹರೆಯದ ಅರೆಕಾಲಿಕ ಬೌಲರ್ ಆಗಿರುವ ರಾಯುಡು, ಮುಂದಿನ 14 ದಿನಗಳೊಳಗೆ ಪರೀಕ್ಷೆಗೆ ಒಳಗಾಗಬೇಕಿದೆ ಎಂದು ಐಸಿಸಿ ಪ್ರಕಟಣೆಯಲ್ಲಿ ತಿಳಿಸಿದೆ.  ಹಾಗೊಂದು ವೇಳೆ ಬೌಲಿಂಗ್ ಆ್ಯಕ್ಷನ್ ನಲ್ಲಿ ತೊಂದರೆ ಕಂಡುಬಂದರೆ ಬೌಲಿಂಗ್ ಮಾಡುವುದರಿಂದ ಅಮಾನತುಗೊಳಿಸುವಗೊಳಿಸುವ ಸಾಧ್ಯತೆಯಿದೆ. 
ಈಗಾಗಲೇ ದೇಶೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರುವ ರಾಯುಡು ಏಕದಿನ ಕ್ರಿಕೆಟ್‌ನತ್ತ ಹೆಚ್ಚಿನ ಗಮನ ಹಾಯಿಸಿದ್ದಾರೆ. ಅಲ್ಲದೆ ಇದುವರೆಗೆ 46 ಏಕದಿನ ಹಾಗೂ ಆರು ಟ್ವೆಂಟಿ-20 ಪಂದ್ಯಗಳಲ್ಲಿ ದೇಶವನ್ನು ಪ್ರತಿನಿಧಿಸಿದ್ದಾರೆ. ಮುಂಬರುವ ವಿಶ್ವಕಪ್ ಹಿನ್ನಲೆಯಲ್ಲಿ ನಂ.4 ಸ್ಥಾನಕ್ಕೆ ರಾಯುಡು ಸೂಕ್ತ ಆಯ್ಕೆ ಎಂದು ನಾಯಕ ವಿರಾಟ್ ಕೊಹ್ಲಿ ಈ ಹಿಂದೆಯೇ ಸ್ಪಷ್ಟನೆ ನೀಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com